ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಜ್ಜೆ ಹಾಕಿದ ಕಾಡಾನೆ

ಸುಂಟಿಕೊಪ್ಪ : ಇಲ್ಲಿಗೆ ಸಮೀಪದ ಏಳನೇ ಹೊಸಕೋಟೆಯ ಮೆಟ್ನಳ್ಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿತು.

ರಸ್ತೆಯ ಮಧ್ಯದಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಇಡುತ್ತಾ ನಿಧನಾಗತಿಯಲ್ಲಿ ನಡೆಯುತ್ತಿತ್ತು. ಇದರಿಂದ ವಾಹನ ಸವಾರರು ಕೆಲ ಹೊತ್ತಿನವರೆಗೂ ನಿಂತು ನಂತರ ಮುಂದೆ ಸಾಗಿದರು.

ಏಳನೇ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳು ನಡೆದಾಡುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿವೆ.

Leave a Reply

Your email address will not be published. Required fields are marked *