ಆರೋಪಿಯ ಫೋನ್ ಬಳಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ.
ಬಿಹಾರ : ಆರ್ಕೆಸ್ಟ್ರಾ ನರ್ತಕಿಯನ್ನು ಕೆಲವು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯೊಬ್ಬನ ಫೋನ್ ಬಳಸಿ ಯುವತಿ ಪೊಲೀಸರಿಗೆ ಕರೆ ಮಾಡಿ ರಕ್ಷಣೆ ಕೋರಿದ್ದಾಳೆ.
ಇದರಿಂದಾಗಿ ಆಕೆಯ ರಕ್ಷಣೆ ಮತ್ತು ಆರು ಆರೋಪಿಗಳಲ್ಲಿ ಒಬ್ಬನ ಬಂಧನ ಸಾಧ್ಯವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಇಬ್ಬರು ಪುರುಷರು ಆಕೆಯನ್ನು ಅಪಹರಿಸಿ ಸುಮಾರು 25 ಕಿ.ಮೀ ದೂರದ ಗೋಡೌನ್‌ಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಇತರೆ ನಾಲ್ವರು ಪುರುಷರು ಈಗಾಗಲೇ ಅಲ್ಲಿದ್ದರು.
ಬಲವಂತವಾಗಿ ಮದ್ಯ ಸೇವಿಸಿ ನೃತ್ಯ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಆರು ಪುರುಷರು ಒಬ್ಬರ ನಂತರ ಒಬ್ಬರು ಅತ್ಯಾಚಾರ ಎಸಗಿದ್ದಾರೆ. ಹಲ್ಲೆಯ ನಂತರ, ಐವರು ಪುರುಷರು ಆಕೆಯನ್ನು ಕೋಣೆಯೊಳಗೆ ಕೂಡಿಹಾಕಿ ಪರಾರಿಯಾಗಿದ್ದಾರೆ. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಒಳಗೆ ಮಲಗಿದ್ದ.
ಪರಿಸ್ಥಿತಿಯ ಲಾಭ ಪಡೆದುಕೊಂಡ ಮಹಿಳೆ, ಮಲಗಿದ್ದ ವ್ಯಕ್ತಿಯ ಫೋನ್ ಬಳಸಿ, ಮಧ್ಯರಾತ್ರಿ 12.15 ರ ಸುಮಾರಿಗೆ ತುರ್ತು ಸಂಖ್ಯೆ 112 ಗೆ ಕರೆ ಮಾಡಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ತುರ್ತು ಕರೆ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೊರಗಿನಿಂದ ಬಾಗಿಲು ಲಾಕ್ ಮಾಡಲಾಗಿತ್ತು ಮತ್ತು ಪೊಲೀಸ್ ಸಿಬ್ಬಂದಿ ಗೋಡೌನ್ ಒಳಗೆ ಪ್ರವೇಶಿಸಲು ಬಾಗಿಲು ಒಡೆಯಬೇಕಾಯಿತು ಎಂದು ಅಧಿಕಾರಿ ಹೇಳಿದರು. ಮೂಲದ ಪ್ರಕಾರ, ಸಂತ್ರಸ್ತೆ ಒಳಗೆ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮದ್ಯದ ಬಾಟಲಿಗಳು ಕೋಣೆಯಲ್ಲಿ ಹರಡಿಕೊಂಡಿವೆ. ಅಲ್ಲಿ ಒಬ್ಬ ವ್ಯಕ್ತಿ ಕುಡಿದ ಮತ್ತಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ಗಾಯಗೊಂಡ ಮಹಿಳೆಯನ್ನು ಪೂರ್ಣಿಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಸ್ತುತ ಆಕೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
For More Updates Join our WhatsApp Group :




