ಇ-ಟಿ.ಡಿ.ಆರ್ ಪೋರ್ಟಲ್ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅಪರ ಆಯುಕ್ತರ ನಿರ್ದೇಶನ.
ಬೆಂಗಳೂರು: ಪೂರ್ವ ನಗರ ಪಾಲಿಕೆಯ ಭೂಸ್ವಾಧೀನ ಹಾಗೂ ಟಿ.ಡಿ.ಆರ್ ವಿಭಾಗದಲ್ಲಿನ ಆಡಳಿತಾತ್ಮಕ ಕಾರ್ಯವೈಖರಿಯನ್ನು ಮತ್ತಷ್ಟು ಸುಗಮಗೊಳಿಸುವ ಹಿನ್ನೆಲೆಯಲ್ಲಿ *ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್* ರವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.
ಸಭೆಯಲ್ಲಿ ನೀಡಲಾದ ಪ್ರಮುಖ ನಿರ್ದೇಶನಗಳು:
* ಭೂಸ್ವಾಧೀನ ಮತ್ತು ಟಿ.ಡಿ.ಆರ್ ವಿಭಾಗಗಳಲ್ಲಿ ಬಾಕಿ ಇರುವ ಎಲ್ಲಾ ಕಡತಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
* ಟಿ ಡಿ ಆರ್ ಪಡೆದಿರುವ ಆರ್.ಡಿ ಸ್ವತ್ತುಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶದಲ್ಲಿ ಖಾತೆ ವಿಭಜನೆ ಪ್ರಕ್ರಿಯೆಯನ್ನು ವೇಗಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
* ಇ-ಟಿ.ಡಿ.ಆರ್ ಪೋರ್ಟಲ್ ಅಭಿವೃದ್ಧಿ ಕಾರ್ಯವನ್ನು ತಾಂತ್ರಿಕ ತಂಡವು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಹಾಗೂ ಟಿ.ಡಿ.ಆರ್ ಸಂಬಂಧಿತ ಎಲ್ಲಾ ಕಡತಗಳನ್ನು ಇ-ಟಿ.ಡಿ.ಆರ್ ಪೋರ್ಟಲ್ ಮೂಲಕ ನಿರ್ವಹಿಸುವಂತೆ ಸೂಚನೆ ನೀಡಲಾಯಿತು.
* ಟಿ.ಡಿ.ಆರ್ ಸಂಬಂಧಿತ ನ್ಯಾಯಾಲಯ ದಾಖಲಾಗಿರುವ ಪ್ರಕರಣಗಳು ಹಾಗೂ ಕಾನೂನು ಪ್ರಕ್ರಿಯೆಗಳನ್ನು ಆದ್ಯತೆಯ ಮೇರೆಗೆ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ನಗರಾಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಿರುವ ಭೂಸ್ವಾಧೀನ ಮತ್ತು ಟಿ.ಡಿ.ಆರ್ ಪ್ರಕ್ರಿಯೆಗಳನ್ನು ಸರಳೀಕರಿಸುವ ಮೂಲಕ ಸಾರ್ವಜನಿಕರಿಗೆ ವೇಗವಾಗಿ ಸೇವೆ ಒದಗಿಸುವುದು ಹಾಗೂ ಆಡಳಿತಾತ್ಮಕ ಪಾರದರ್ಶಕತೆಯನ್ನು ಹೆಚ್ಚಿಸುವುದು ನಗರ ಪಾಲಿಕೆಯ ಪ್ರಮುಖ ಆದ್ಯತೆಯಾಗಿದೆ ಎಂದು ಅಪರ ಆಯುಕ್ತರು ತಿಳಿಸಿದರು.
For More Updates Join our WhatsApp Group :




