ಆರೋಗ್ಯವೇ ಸಂಪತ್ತು ಎಂಬುದು ತಿಳಿದಿರುವ ವಿಚಾರ. ಆದರೆ ಆರೋಗ್ಯ ಕಾಪಾಡಿಕೊಳ್ಳಲು ನಾವು ಸೇವಿಸುವ ಆಹಾರ ಬಹಳ ನಿರ್ಣಾಯಕ ಪಾತ್ರ ವಹಿಸುತ್ತದೆ. ಆದ್ದರಿಂದ, ಪ್ರತಿನಿತ್ಯ ನಾವು ಸೇವಿಸುವ ಆಹಾರದ ಬಗ್ಗೆ ನಮಗೆ ಅರಿವಿರಬೇಕು. ಏಕೆಂದರೆ ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಎಲ್ಲಾ ರೀತಿಯ ಆಹಾರಗಳ ಸೇವನೆ ಮಾಡುವುದು ಒಳ್ಳೆಯದಲ್ಲ. ಅದರಲ್ಲಿಯೂ ಸೋರೆಕಾಯಿ ತಿನ್ನುವ ಮುಂಚೆ ನಾಲ್ಕು ಬಾರಿ ಯೋಚಿಸಬೇಕು. ಇದು ನಮ್ಮ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳನ್ನು ನೀಡಬಹುದಾದರೂ ಕೂಡ, ಕೆಲವರು ಅದನ್ನು ತಿನ್ನುವುದನ್ನು ತಪ್ಪಿಸಬೇಕು.

ಕೆಲವರು ಸೋರೆಕಾಯಿಯನ್ನು ಇಷ್ಟಪಟ್ಟು ಸೇವನೆ ಮಾಡುತ್ತಾರೆ. ಇದರಿಂದ ಪಲ್ಯ, ಸಾಂಬಾರ್, ಚಟ್ನಿ, ಖೀರ್ ಹೀಗೆ ಖಾರವಾದ ಪದಾರ್ಥಗಳಿಂದ ಹಿಡಿದು ಸಿಹಿ ವರೆಗೆ ಎಲ್ಲಾ ರೀತಿಯ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಇನ್ನು ಈ ಸೋರೆಕಾಯಿ ನಮ್ಮ ನಾಲಿಗೆಗೆ ರುಚಿ ನೀಡುವುದು ಮಾತ್ರವಲ್ಲ ನಮ್ಮ ಆರೋಗ್ಯಕ್ಕೂ ಕೂಡ ಬಹಳ ಪ್ರಯೋಜನಕಾರಿಯಾಗಿದೆ. ಇದು ಅನೇಕ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ವಿಟಮಿನ್ ಸಿ, ವಿಟಮಿನ್ ಬಿ ಕಾಂಪ್ಲೆಕ್ಸ್, ಸತು, ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ನಂತಹ ಸಾಕಷ್ಟು ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾಗಿಯೇ ಇದನ್ನು ಸೇವನೆ ಮಾಡುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಆದರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿರುವ ಈ ತರಕಾರಿಯನ್ನು ಕೆಲವರು ಅಪ್ಪಿತಪ್ಪಿಯೂ ಸೇವನೆ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗದರೆ ಇದು ಯಾರಿಗೆ ಒಳ್ಳೆಯದು? ಇದರಿಂದ ಸಿಗುವ ಪ್ರಯೋಜನಗಳೇನು? ಯಾರು ತಿನ್ನಬಾರದು ಎಂಬುದನ್ನು ತಿಳಿದುಕೊಳ್ಳಿ.
ಸೋರೆಕಾಯಿ ಆರೋಗ್ಯ ಪ್ರಯೋಜನ:
ಈ ತರಕಾರಿ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಫೈಬರ್ ಅಂಶ ಅಧಿಕವಾಗಿರುತ್ತದೆ. ಆದ್ದರಿಂದ, ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಉತ್ತಮ. ಇದನ್ನು ತಿನ್ನುವುದರಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದು ಹೆಚ್ಚು ತಿನ್ನುವ ಬಯಕೆಯನ್ನು ಕೂಡ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೋರೆಕಾಯಿ ಬಿಸಿ ವಾತಾವರಣದಲ್ಲಿ ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಇನ್ನು ಇವುಗಳಲ್ಲಿರುವ ಕಡಿಮೆ ಪಿಷ್ಟ ಅಂಶವು ಮಧುಮೇಹಿಗಳಿಗೆ ಒಳ್ಳೆಯದು. ಅವು ನೈಸರ್ಗಿಕ ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತವೆ ಮತ್ತು ದೇಹದಿಂದ ವಿಷವನ್ನು ತೆಗೆದುಹಾಕುತ್ತವೆ.
ಸೋರೆಕಾಯಿ ಸೇವನೆ ಯಾರಿಗೆ ಒಳ್ಳೆಯದಲ್ಲ
ಜೀರ್ಣಕಾರಿ ಸಮಸ್ಯೆ ಇರುವವರಿಗೆ;
ಸೂಕ್ಷ್ಮ ಜೀರ್ಣಾಂಗ ವ್ಯವಸ್ಥೆ ಇರುವವರು ಅಥವಾ ಈಗಾಗಲೇ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಸೋರೆಕಾಯಿ ತಿನ್ನಬಾರದು ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿ ಫೈಬರ್ ಅಂಶ ಚೆನ್ನಾಗಿದ್ದರೂ ಕೂಡ ಇದು ಜೀರ್ಣವಾಗುವುದಿಲ್ಲ. ಆದ್ದರಿಂದ, ಅನಿಲ, ಅಜೀರ್ಣ ಮತ್ತು ಹೊಟ್ಟೆ ಉಬ್ಬುವಿಕೆಯಂತಹ ಸಮಸ್ಯೆಗಳಿರುವವರು ಈ ತರಕಾರಿ ಸೇವನೆ ಮಾಡುವುದನ್ನು ತಪ್ಪಿಸುವುದು ಉತ್ತಮ. ಇಲ್ಲದಿದ್ದರೆ, ನಿಮ್ಮ ಸಮಸ್ಯೆಗಳು ಇನ್ನಷ್ಟು ಹದಗೆಡಬಹುದು.