ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ, ಮುಖ್ಯಮಂತ್ರಿ ನಾನೇ – ಸಿದ್ದರಾಮಯ್ಯ.

ಮುಖ್ಯಮಂತ್ರಿ Siddaramaiah ವಿಧಾನಸೌಧದ ಸಮ್ಮೇಳನಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿ

ನವದೆಹಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದವರೇ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯನ್ನು ಅಲ್ಲಗೆಳೆದ ಮೇಲೆ , ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳನ್ನು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದರು.

ಅಧಿಕಾರ ಹಸ್ತಾಂತರದ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ

ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇನೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ. ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ ‘ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ’ ಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ ಎಂದು ಮರುಪ್ರಶ್ನಿಸಿದರಲ್ಲದೇ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೇಂದು ಅವರೇ ತಿಳಿಸಿದ್ದಾರೆ ಎಂದರು.

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ

ಕಾಂಗ್ರೆಸ್ ನ ಕೆಲ ಶಾಸಕರೇ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅಭಿಪ್ರಾಯ ತಿಳಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಇದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ ಎಂದರು.

ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯ ಭೇಟಿ

ರಾಹುಲ್ ಗಾಂಧಿಯವರನ್ನು ಭೇಟಿಯಾಗುವ ಸಂಭವವಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಇಂದು ಸಂಜೆ ಭೇಟಿ ಮಾಡಿ, ಎಂ ಎಲ್ ಸಿ , ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು ಎಂದರು.

ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ.

ಕರ್ನಾಟಕದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಪುನರುಚ್ಚರಿಸಿದ್ದೇವೆ ಎಂದರು. ಕರ್ನಾಟಕದ ಮುಖ್ಯಮಂತ್ರಿ ನಾನೇ ಎಂದರು. ಡಿ.ಕೆ.ಶಿವಕುಮಾರ್ ಆಗಲಿ ಅಥವಾ ಶಾಸಕರು ಯಾರೇ ಆಗಲಿ ಮುಖ್ಯಮಂತ್ರಿಯಾಗಬೇಕೆAಬ ಆಸೆ ಇಟ್ಟುಕೊಂಡಿದ್ದರೆ ಅದರಲ್ಲ ತಪ್ಪೇನಿಲ್ಲ ಎಂದರು.

ಸಚಿವ ಸಂಪುಟ ಪುನರ್ರಚನೆ ಬಗ್ಗೆ ಚರ್ಚೆಯಿಲ್ಲ

ಸಚಿವ ಸಂಪುಟ ಪುನರ್ರಚನೆ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡುತ್ತಾ, ಸಚಿವ ಸಂಪುಟ ಪುನರ್ರಚನೆ ಬಗ್ಗೆ ಯಾವುದೇ ಚರ್ಚೆಯಾಗುವುದಿಲ್ಲ ಎಂದರು.

ಜನೌಷಧಿ ಕೇಂದ್ರ ಬಂದ್-ಮಾಹಿತಿ ಪಡೆದು ಪ್ರತಿಕ್ರಿಯೆ

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಜನೌಷಧಿ ಕೇಂದ್ರ ಬಂದ್ ಮಾಡಿರುವ ಆದೇಶಕ್ಕೆ ಹೈಕೋರ್ಟ್ ತಡೆನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡಲಾಗುವುದು ಎಂದರು.

ಸಚಿವಸಂಪುಟದಲ್ಲಿ ಚರ್ಚೆಯಾಗಿಲ್ಲ

CBSE ಕನ್ನಡ ಪತ್ರಿಕೆಯನ್ನು 125 ಅಂಕಗಳಿಂದ 100 ಕ್ಕೆ ಇಳಿಸುವ ಪ್ರಸ್ತಾಪ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಸಚಿವ ಸಂಪುಟದಲ್ಲಿ ಮಂಡನೆಯಾಗಲೀ, ಚರ್ಚೆಯಾಗಲೀ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *