ಅಧಿಕಾರ ಹಂಚಿಕೆ ಜಟಾಪಟಿ: ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ.

ಅಧಿಕಾರ ಹಂಚಿಕೆ ಜಟಾಪಟಿ: ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ.

ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ, ಹೈಕಮಾಂಡ್ ಸ್ಪಷ್ಟ ನಿರ್ಧಾರವೇ ಪರಿಹಾರ.

ದಾವಣಗೆರೆ : ಸದ್ಯದ ಸ್ಥಿತಿಯಲ್ಲಿ ಮುಂದುವರೆದರೆ ಮುಂದೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ಕಷ್ಟ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಸಚಿವ ಸತೀಶ್​​ ಜಾರಕಿಹೊಳಿ ಸಹಮತ ವ್ಯಕ್ತಪಡಿಸಿದ್ದಾರೆ.  ಪಕ್ಷದಲ್ಲಿ ಸ್ಪಷ್ಟತೆಯ ಕೊರತೆಯಿಂದಾಗಿ ಕಾರ್ಯಕರ್ತರು, ಶಾಸಕರು ಮತ್ತು ಅಧಿಕಾರಿಗಳಲ್ಲಿ ಗೊಂದಲ ಉಂಟಾಗಿದೆ. ಈ ಪರಿಸ್ಥಿತಿ ಶೀಘ್ರವಾಗಿ ತಿಳಿಗೊಳ್ಳಬೇಕು.

ಪಕ್ಷದ ಭವಿಷ್ಯದ ಬಗ್ಗೆ ಇರುವ ಅನಿಶ್ಚಿತತೆಯನ್ನು ನಿವಾರಿಸಲು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ನಿಂದ ಸ್ಪಷ್ಟ ನಿರ್ದೇಶನ ಬಂದರೆ ಮಾತ್ರ ಈ ಗೊಂದಲ ನಿಲ್ಲುತ್ತದೆ. ಹೈಕಮಾಂಡ್ ಒಂದು ದಿನದಲ್ಲಿಯೇ ಈ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಹೊಂದಿದೆ ಎಂದು ಅವರು ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *