ಕಾಫಿನಾಡಿನಲ್ಲಿ ವರುಣನ ಅಬ್ಬರ: ಮೂಡಿಗೆರೆ ರಸ್ತೆಗಳು ಜಲಾವೃತ
ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹವಾಮಾನ ದಿಢೀರ್ ಬದಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ಬಿರುಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ತಾಲೂಕಿನ ಗ್ರಾಮೀಣ ಭಾಗಗಳಲ್ಲೂ ಮಳೆಯ ಆರ್ಭಟ ಜೋರಾಗಿದೆ.
ಆಲ್ದೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಾಫಿ ತೋಟಗಳಿಗೆ ಇದು ಆಸರೆಯಾದರೂ ಬಿರುಗಾಳಿಯ ಭೀತಿ ಆವರಿಸಿದೆ. ಮೂಡಿಗೆರೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ರಸ್ತೆಗಳು ನದಿಯಂತಾಗಿವೆ. ಚರಂಡಿಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿದ್ದು, ಮಾರುಕಟ್ಟೆಗೆ ಬಂದಿದ್ದ ಸಾರ್ವಜನಿಕರು ಮತ್ತು ವಾಹನ ಸವಾರರು ಹೈರಾಣಾಗಿದ್ದಾರೆ. ಮಲೆನಾಡು ಭಾಗದ ಹಲವೆಡೆ ಮರಗಳು ಉರುಳುವ ಭೀತಿ ಎದುರಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
For More Updates Join our WhatsApp Group :




