ಕೈಗೆ ಕಪ್ಪು ಪಟ್ಟಿ ಧರಿಸಿ ಬೆಂಬಲಿಗರ ಪ್ರತಿಭಟನೆ.
ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ಅವರ ಬೆಂಬಲಿಗರು ಧಾರವಾಡದಲ್ಲಿ ಮೌನ ಮೆರವಣಿಗೆ ನಡೆಸಿದರು.
ನಗರದ ಕಲಾಭವನದಿಂದ ಕೆಸಿಸಿ ಬ್ಯಾಂಕ್ ವರೆಗೆ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಭಾಗವಹಿಸಿದರು.
ಕುಲಕರ್ಣಿ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿರುವ ಬೆಂಬಲಿಗರು ಅವರು ನಿರಪರಾಧಿ ಎಂದು ಘೋಷಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶಾಂತಿಯುತ ಪ್ರತಿಭಟನೆಯ ಮೂಲಕ ಪ್ರಕರಣದ ಮರುಪರಿಶೀಲನೆಗೆ ಒತ್ತಾಯಿಸಲಾಗಿದೆ.
For More Updates Join our WhatsApp Group :




