ಹೊಸಕೋಟೆ ಸರಣಿ ಅಪಘಾತ: 7 ಜನರ ದುರ್ಮರಣ.

ಹೊಸಕೋಟೆ ಸರಣಿ ಅಪಘಾತ: 7 ಜನರ ದುರ್ಮರಣ.

ಭೀಕರ ಕ್ಷಣಗಳನ್ನು ಬಿಚ್ಚಿಟ್ಟ ಕ್ಯಾಂಟರ್ ಚಾಲಕ.

ದೇವನಹಳ್ಳಿ : ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್​​ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *