ಮಡಿಕೇರಿ ಚೇರಂಬಾಣೆಯಲ್ಲಿ ಘಟನೆ; ಪೊಲೀಸರು ತನಿಖೆ ಮುಂದುವರಿಕೆ
ಮಡಿಕೇರಿ : Madikeri ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ (51) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಬೋಧಿಸಿದ್ದ ರೋಹಿಣಿ ಅವರು ತಮ್ಮ ಮನೆಯಲ್ಲಿ ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ತಡರವರೆಗೆ ಕೆಲಸ ಮಾಡಿದ ಬಳಿಕ ಮಲಗಿದ್ದ ಅವರು ಮುಂಜಾನೆ 5 ಗಂಟೆ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಬ್ಧ ಕೇಳಿ ಪತಿ ಮತ್ತು ಪುತ್ರಿ ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ.ಪತಿ ಕರುಂಬಯ್ಯ ಅವರ ಪ್ರಕಾರ, 250ಕ್ಕೂ ಹೆಚ್ಚು ಮನೆಗಳ ಜನಗಣತಿ ಕೆಲಸದ ಒತ್ತಡದಿಂದ ಅವರು ಬಳಲುತ್ತಿದ್ದರು. ಸಹಾಯಕ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದನೆ ಸಿಗಲಿಲ್ಲ ಎಂದು ಆರೋಪಿಸಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ.
For More Updates Join our WhatsApp Group :




