ಮುಖಾಮುಖಿ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಹಾಗೂ ಬಸ್‌ನಲ್ಲಿದ್ದ ಏಳು ಜನ ಗಾಯ.
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಮಾನೀರು ದೇವಸ್ಥಾನದ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಹಾಗೂ ಬಸ್‌ನಲ್ಲಿದ್ದ ಏಳು ಜನ ಗಾಯಗೊಂಡಿದ್ದಾರೆ. ಬೊಲೆರೋ ವಾಹನ ಚಾಲಕ ಕಾರವಾರದ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರವಾರದಿಂದ ಕುಮಟಾಗೆ ಮೀನು ತುಂಬಿಕೊಂಡು ತೆರಳಿದ್ದ ಬೊಲೆರೋ ವಾಹನ, ಕುಮಟಾದಿಂದ ಕಾರವಾರದ ಕಡೆಗೆ ಮರಳುತ್ತಿದ್ದಾಗ ಗೋಕರ್ಣದ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
For More Updates Join our WhatsApp Group :




