ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಗಾಳಿ-ಮಳೆ ಮುನ್ಸೂಚನೆ.
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಆಲಿಕಲ್ಲು ಮಳೆ ಹಾಗೂ ಗಾಳಿ ಮಳೆಯ ಅಬ್ಬರ ಮುಂದುವರಿದಿದ್ದು, ಇಂದೂ ಸಹ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕಲಬುರಗಿ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ 42 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಕಾಲ ಇದೇ ರೀತಿಯ ಬಿಸಿಲಿನ ತೀವ್ರತೆ ಮುಂದುವರಿಯಲಿದೆ ಎಂದು ಇಲಾಖೆ ಎಚ್ಚರಿಸಿದೆ.
ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಜೊತೆಗೆ ಕೆಲವೆಡೆ ಹೀಟ್ ವೇವ್ ಎಚ್ಚರಿಕೆ ಕೂಡ ನೀಡಲಾಗಿದೆ.
ಕಲಬುರಗಿ, ರಾಯಚೂರು, ಯಾದಗಿರಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ 30-40 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ವಾತಾವರಣ ಮುಂದುವರಿಯಲಿದೆ.
ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ.
ಇತ್ತೀಚಿನ ಮಳೆಯಿಂದ ಬೆಂಗಳೂರಿನಲ್ಲಿ ದುರಂತ ಘಟನೆಗಳು ವರದಿಯಾಗಿವೆ. ಜೆ.ಪಿ.ನಗರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಮಂದಿ ಸಾವನ್ನಪ್ಪಿರುವುದು ಆತಂಕಕಾರಿ ಬೆಳವಣಿಗೆ.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH




