ಸಮಂತಾ ಬಗ್ಗೆ ವಿವಾದಾತ್ಮಕ ಹೇಳಿಕೆ: ತೆಲಂಗಾಣ ಸಚಿವೆ ವಿರುದ್ಧ ಕೇಸ್ ದಾಖಲಿಸಿದ ನಾಗಾರ್ಜುನ

ನಟ ನಾಗ ಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ಅವರ ವಿಚ್ಛೇದನಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಸಚಿವೆ ಮತ್ತು ಕಾಂಗ್ರೆಸ್ ನಾಯಕಿ ಕೊಂಡ ಸುರೇಖಾ ವಿರುದ್ಧ ನಟ ನಾಗಾರ್ಜುನ್ ಅವರು ಗುರುವಾರ ದೂರು ದಾಖಲಿಸಿದ್ದಾರೆ.

ಹೈದರಾಬಾದ್: ನಟ ನಾಗ ಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ಅವರ ವಿಚ್ಛೇದನಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಸಚಿವೆ ಮತ್ತು ಕಾಂಗ್ರೆಸ್ ನಾಯಕಿ ಕೊಂಡ ಸುರೇಖಾ ವಿರುದ್ಧ ನಟ ನಾಗಾರ್ಜುನ್ ಅವರು ಗುರುವಾರ ದೂರು ದಾಖಲಿಸಿದ್ದಾರೆ.

ನಟ ನಾಗ ಚೈತನ್ಯ ಅವರು ದೂರಿನ ಪ್ರತಿಯನ್ನು ತಮ್ಮ ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ಮುರಿದುಬೀಳಲು ಬಿಆರ್‌ಎಸ್ ಮುಖಂಡ ಕೆಟಿ ರಾಮರಾವ್ ಅವರೇ ಕಾರಣ ಎಂದು ಸಚಿವೆ ಕೊಂಡಾ ಸುರೇಖಾ ಸ್ಫೋಟಕ ಆರೋಪ ಮಾಡಿದ್ದರು. ತೀವ್ರ ವಿರೋಧದ ನಂತರ ಸಚಿವೆಯ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದರು.

KTR ಬಳಿ ಹೋಗಲು ಸಮಂತಾಗೆ ಕೆಟಿಆರ್ ಬಳಿ ಹೋಗ್ಲಿಲ್ಲ ಅಂದ್ರೆ ಮನೆಯಲ್ಲಿ ಇರುವಂತಿಲ್ಲ ಎಂದು ಸಮಂತಾಗೆ ನಟ ನಾಗಾರ್ಜುನ ಬೆದರಿಕೆ ಹಾಕಿದ್ದರು ಎಂದೂ ಸಚಿವೆ ಆಪಾದಿಸಿದ್ದಾರೆ. ‘ಎನ್ ಕನ್ವೆನ್ಷನ್ ಕಟ್ಟಡ ಒಡೆಯಬಾರದು ಎಂದರೆ ಸಮಂತಾಳನ್ನು ನನ್ನ ಬಳಿ ಕಳಿಸಿ ಎಂದು ನಾಗಾರ್ಜುನಗೆ ಕೆ.ಟಿ. ರಾಮ ರಾವ್ ಹೇಳಿದ್ದರು. ಕೆ.ಟಿ. ರಾಮ ರಾವ್ ಬಳಿ ಹೋಗು ಎಂದು ಸಮಂತಾಗೆ ನಾಗಾರ್ಜನ ಒತ್ತಾಯ ಮಾಡಿದರು. ಆದರೆ ಸಮಂತಾ ಒಪ್ಪಿಕೊಳ್ಳಲಿಲ್ಲ. ಒಪ್ಪದಿದ್ದರೆ ಮನೆ ಬಿಟ್ಟುಹೋಗು ಎಂದು ನಾಗಾರ್ಜುನ ಹೇಳಿದರು. ಅದಕ್ಕಾಗಿ ನಾಗ ಚೈತನ್ಯಗೆ ಸಮಂತಾ ಡಿವೋರ್ಸ್ ನೀಡಿದರು’ ಎಂದು ಕೊಂಡ ಸುರೇಖಾ ಆರೋಪಿಸಿದ್ದರು.

Leave a Reply

Your email address will not be published. Required fields are marked *