ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ‘ಋತುಸ್ರಾವ ರಜೆ’ ಕಡ್ಡಾಯ.!

ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ‘ಋತುಸ್ರಾವ ರಜೆ’ ಕಡ್ಡಾಯ.!

ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ.

ಬೆಂಗಳೂರು : ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ ನೀತಿಯನ್ನು ರಾಜ್ಯ ಸರ್ಕಾರವು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಮಹಿಳಾ ಉದ್ಯೋಗಿಗಳಿಗೆ ನೀಡಲು ಹಿಂದೆ-ಮುಂದೆ ನೋಡುತ್ತಿದೆ. ಹಾಗಾಗಿ ಇದನ್ನು ಸರಿಯಾದ ರೀತಿಯಲ್ಲಿ ಹಾಗೂ ಕಡ್ಡಾಯವಾಗಿ ಜಾರಿಗೆ ತರುವಂತೆ ಆದೇಶವನ್ನು ಹೈಕೋರ್ಟ್​​ ನೀಡಿದೆ.

ನೋಂದಾಯಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ. ಶಾಶ್ವತ, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಈ ವಿಸ್ತರಣೆ ಮಾಡಬೇಕು ಎಂದು ಹೇಳಿದೆ.ಕೇವಲ ಸಾಫ್ಟ್‌ವೇರ್ ಅಥವಾ ದೊಡ್ಡ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ ಅಸಂಘಟಿತ ವಲಯದ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿಯ ಹೋಟೆಲ್ ನೌಕರರೊಬ್ಬರು ತಮಗೆ ರಜೆ ನೀಡುತ್ತಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಕೆಲವು ಉದ್ಯೋಗದಾತರ ಸಂಘಟನೆಗಳು ಈ ನೀತಿಯನ್ನು ವಿರೋಧಿಸಿದ್ದರೂ, ಮಹಿಳೆಯರ ಜೈವಿಕ ಅಗತ್ಯತೆಗಳನ್ನು ಗೌರವಿಸುವುದು ಸಮಾನತೆಯ ಸಂಕೇತ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *