ಜೂನ್ 21ರಂದು ಯೋಗ ದಿನಾಚರಣೆ: ಮನೆಮನೆಗೂ ಯೋಗ ಅಭಿಯಾನಕ್ಕೆ ಕರ್ನಾಟಕ ಸರ್ಕಾರ ಸಿದ್ಧತೆ
ಬೆಂಗಳೂರು: 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರತಿವರ್ಷದಂತೆ ಜೂನ್ 21 ರಂದು ಆಚರಿಸಲಾಗುವುದು. ಈ ವರ್ಷದ ಯೋಗ ದಿನಾಚರಣೆ ಘೋಷವಾಕ್ಯ ‘ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ’ ಎಂಬ ವಿಶಾಲವಾದ ದೃಷ್ಟಿಕೋನವಿದೆ. ಕರ್ನಾಟಕದಲ್ಲಿ ಪ್ರಸಕ್ತ ಸಾಲಿನಲ್ಲಿ ಮನೆ-ಮನೆಗೂ ಯೋಗ, ಎಲ್ಲರಿಗೂ ಯೋಗ ಎಂಬ ವಿಶಾಲ ದೃಷ್ಟಿಕೋನದಿಂದ ಆಚರಿಸಲಾಗುವುದು.
ಜೂನ 21 ರಂದು ಈ ಕಾರ್ಯಕ್ರಮವನ್ನು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮವನ್ನು ಹಲವಾರು ಸಂಘ ಸಂಸ್ಥೆಗಳು, ಆಯುಷ್ ಕಾಲೇಜುಗಳು ಹಾಗೂ ಯೋಗ ಬಂಧುಗಳ ಸಹಕಾರದಿಂದ ಜೂನ್ 21 ರ ಮುಂಜಾನೆ 6 ಗಂಟೆಯಿಂದ 8 ಗಂಟೆಯವರೆಗೆ ಸುಮಾರು 5000 ಯೋಗ ಬಂಧುಗಳ ಯೋಗಾಭ್ಯಾಸ ಕಾರ್ಯಕ್ರಮಗಳ ಮೂಲಕ ಆಯೋಜಿಸಲಾಗುವುದು.

ಈ ಕಾರ್ಯಕ್ರಮಗಳ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ರವರು ನೆರೆವೇರಿಸಲಿದ್ದು, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಲವಾರು
ಯೋಗಗುರುಗಳು, ಕರ್ನಾಟಕದ ಗಣ್ಯವ್ಯಕ್ತಿಗಳು, ಅಂತಾರಾಷ್ಟ್ರೀಯ ಕ್ರೀಡಾಸಾಧಕರು ಹಾಗೂ ಸಿನಿ ತಾರೆಯರು ಸಹ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುವುದು..ಜೂನ್ ಮೊದಲ ವಾರದಲ್ಲಿ ‘ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ’ ಎಂಬ ರಾಷ್ಟ್ರೀಯ ವಿಚಾರಸಂಕೀರ್ಣವನ್ನು ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ‘ವಿಜ್ಞಾನ ಯೋಗ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಆಯುಷ್ ಆಯುಕ್ತ ಸುನೀಲ್ ಪನ್ವರ್ ಹಾಗೂ ಇತರರು ಉಪಸ್ಥಿತರಿದ್ದರು.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH




