ಬಾಡಿಗೆ ಮನೆ ಹುಡುಕಾಟದ ನೆಪದಲ್ಲಿ 55 ಲಕ್ಷ ಕಳ್ಳತನ.

ಬಾಡಿಗೆ ಮನೆ ಹುಡುಕಾಟದ ನೆಪದಲ್ಲಿ 55 ಲಕ್ಷ ಕಳ್ಳತನ.

348 ಗ್ರಾಂ ಚಿನ್ನಾಭರಣ ದೋಚಿದ ಫೋಟೋಗ್ರಾಫರ್ ಬಂಧನ.

ಬೆಂಗಳೂರು: ಬಾಡಿಗೆ ಮನೆ ಹುಡುಕಲು ಹೋದ ವ್ಯಕ್ತಿಯೊಬ್ಬ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್​ ಆಗಿರುವ ವೈಟ್ ಫೀಲ್ಡ್ ನಿವಾಸಿ ಕಿರಣ್​​ ಬಂಧಿತ ಆರೋಪಿಯಾಗಿದ್ದು, ಮಲೆಮಹದೇಶ್ವರನ ದರ್ಶನ ಮಾಡಿ ಹಿಂದಿರುಗಿದ್ದ ಆರೋಪಿಯನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೋಟೋ ಸ್ಟುಡಿಯೋ ನಡೆಸುತ್ತಿದ್ದ ಕಿರಣ್​, ಕೋವಿಡ್​​ ವೇಳೆ ನಷ್ಟ ಉಂಟಾದ ಕಾರಣ ಅದನ್ನು ಮುಚ್ಚಿದ್ದ. ಕ್ಯಾಮರಾ ಇದ್ದ ಕಾರಣ ಸಣ್ಣ ಪುಟ್ಟ ಕಾರ್ಯಕ್ರಮಗಳನ್ನು ನಂಬಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೊಂಡನಹಳ್ಳಿಯಲ್ಲಿ ಬಾಡಿಗೆ ಮನೆ ಹುಡುಕುತ್ತಿದ್ದ ಕಿರಣ್, ಸಾಫ್ಟ್ ವೇರ್ ಎಂಜಿನಿಯರ್ ಜಗದೀಶ್​​ ಎಂಬವರ ಮನೆ ಬಳಿ ಮನೆ ಬಾಡಿಗೆಗೆ ಇದೆ ಎಂಬ ಬೋರ್ಡ್​​ ನೋಡಿದ್ದಾನೆ. ಈ ಹಿನ್ನೆಲೆ ವಿಚಾರಿಸಲೆಂದು ಮನೆ ಬಳಿ ಹೋದಾಗ ಶೂ ರ್ಯಾಕ್​​ನಲ್ಲಿ ಮನೆಯ ಬೀಗ ಆತನಿಗೆ ಕಂಡಿದೆ. ಅದನ್ನು ಬಳಸಿ ಮನೆಯ ಬಾಗಿಲು ಓಪನ್​​ ಮಾಡಿ ಒಳಗೆ ಹೋಗಿದ್ದ ಈತ, ಮನೆಯಲ್ಲಿದ್ದ ಚಿನ್ನಾಭರಣ ಕದ್ದಿದ್ದ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಕಳ್ಳತನ ನಡೆದಿರುವ ಬಗ್ಗೆ ಮನೆ ಮಾಲೀಕ ಜಗದೀಶ್​ ಪೊಲೀಸರಿಗೆ ದೂರು ನೀಡಿದ್ದು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿ ಆರೋಪಿಯನ್ನ ಖಾಕಿ ಪತ್ತೆ ಮಾಡಿದೆ.

ಕಳ್ಳತನ ನಡೆಸಿ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಆರೋಪಿ

ಬಾಡಿಗೆ ಮನೆ ಬಗ್ಗೆ ವಿಚಾರಿಸಲು ಹೋಗಿ ಕಳ್ಳತನ ನಡೆಸಿದ್ದ ಆರೋಪಿ ಕಿರಣ್​​ಗೆ ತಾನು ಮಾಡಿದ ಕೆಲಸದ ಬಗ್ಗೆ ಬಳಿಕ ಪಾಪಪ್ರಜ್ಞೆ ಕಾಡಿತ್ತು. ಹೀಗಾಗಿ ಆ ಬಳಿಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನವನ್ನು ಈತ ಮಾಡಿದ್ದ. ಅದಾಗಲೇ ಆರೋಪಿಯ ಜಾಡು ಪತ್ತೆ ಮಾಡಿದ್ದ ಪೊಲೀಸರು ಈತ ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದಂತೆ ಖೆಡ್ಡಾಗೆ ಕಡೆವಿದ್ದಾರೆ. ಮಾಡಬಾರದ್ದನ್ನು ಮಾಡಲು ಹೋದ ಫೋಟೋಗ್ರಾಪರ್​​ ಈಗ ಖಾಕಿ ಕೈಲಿ ತಗಲಾಕಿಕೊಂಡಿದ್ದು, ಘಟನೆ ಬಗ್ಗೆ ಆರೋಪಿಯ ವಿಚಾರಣೆ ಮುಂದುವರಿದಿದೆ

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *