ಪಂಚ ಗ್ಯಾರಂಟಿ’ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48-60 ಸಾವಿರ ರೂ.ಸೌಲಭ್ಯ

ಪಂಚ ಗ್ಯಾರಂಟಿ' ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48-60 ಸಾವಿರ ರೂ.ಸೌಲಭ್ಯ

ಕಲಬುರಗಿ : ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ ಪಂಚ ಗ್ಯಾರಂಟಿ ಯೋಜನೆಗಳಿಂದ ಎಂದರು ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ,ಮಾತಾನಾಡುತ್ತಾ  ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ.ಸೌಲಭ್ಯ ಲಭಿಸಲಿದೆ ಜಾತಿ-ಧರ್ಮ ಇಲ್ಲದೆ ಪ್ರತಿಯೊಬ್ಬರನ್ನು ಆರ್ಥಿಕವಾಗಿ ಸುಸ್ಥಿರವಾಗಿರಿಸಲು ಹಾಕಿಕೊಂಡಿರುವ ಈ ಯೋಜನೆಗಳು ಬಡವರ ಬದುಕನ್ನೆ ಬದಲಿಸುವ ಕರ್ನಾಟಕ ಮಾದರಿ ಆಡಳಿತದ ಗ್ಯಾರಂಟಿ ಯೋಜನೆಗಳಾಗಿ ಪರಿವರ್ತನೆಗೊಂಡಿರುವುದಕ್ಕೆ ಸಂತೃಪ್ತಿ ಭಾವ ನನ್ನಲ್ಲಿ ಮೂಡಿದೆ.

ಶಕ್ತಿ” ಯೋಜನೆಯಡಿ ಪ್ರತಿ ದಿನ 50 ರಿಂದ 60 ಲಕ್ಷ ಜನ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದು, ವಾರ್ಷಿಕವಾಗಿ ಸರ್ಕಾರವು ಇದಕ್ಕಾಗಿ 4,000 ಕೋಟಿ ರೂ. ವೆಚ್ಚ ಮಾಡಲಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಆಗಸ್ಟ್-2024ರ ಅಂತ್ಯಕ್ಕೆ ದಿನನಿತ್ಯ 17.11 ಲಕ್ಷದಂತೆ 41.45 ಕೋಟಿ ಟ್ರಿಪ್ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಇದರ ವೆಚ್ಚ 1,387 ಕೋಟಿ ರೂ. ಗಳನ್ನು ನಮ್ಮ ಸರ್ಕಾರ ಭರಿಸುತ್ತಿದೆ.

“ಅನ್ನ ಭಾಗ್ಯ” ಯೋಜನೆಯಡಿ 10 ಕೆ.ಜಿ. ಆಹಾರ ಧಾನ್ಯ ನೀಡಲಾಗುತ್ತಿದೆ. ಇದರಲ್ಲಿ 5 ಕೆ.ಜಿ ಅಕ್ಕಿಯ ಬದಲು ಪ್ರತಿ ಕೆ.ಜಿ.ಗೆ 34 ರೂ. ಗಳಂತೆ ತಲಾ ಸದಸ್ಯರಿಗೆ 170 ರೂ. ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗುತ್ತಿದೆ. ಪ್ರದೇಶದ 7 ಜಿಲ್ಲೆಗಳಲ್ಲಿ ಕಳೆದ ಜೂನ್-2024 ಮಾಹೆಗೆ ಒಟ್ಟು 22.59 ಲಕ್ಷ ಪಡಿತರ ಚೀಟಿಯ ಕುಟುಂಬದ ಸದಸ್ಯರಿಗೆ 1,551 ಕೋಟಿ ರೂ. ಹಣ ಪಾವತಿಸಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಡಿಪ್ಲೋಮಾ ಮತ್ತು ಪದವಿ ಉತ್ತೀರ್ಣರಾದ ನಿರುದ್ಯೋಗಿಗಳಿಗೆ ಕ್ರಮವಾಗಿ ಮಾಸಿಕ 1,500 ಮತ್ತು 3,000 ಭತ್ಯೆ ನೀಡುವ “ಯುವ ನಿಧಿ” ಯೋಜನೆಯಡಿ ಇದೂವರೆಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 49,691 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ ಅರ್ಹ 22,272 ನಿರುದ್ಯೋಗಿಗಳಿಗೆ 28.39 ಕೋಟಿ ರೂ.ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *