ಆರ್ಯ ಈಡಿಗ ಸಮಾವೇಶದಲ್ಲಿ ನಿಗಮಕ್ಕೆ 500 ಕೋಟಿ, ಮ್ತತೊಂದು ಸಚಿವ ಸ್ಥಾನಕ್ಕೆ ಬೇಡಿಕೆ

ಬೆಂಗಳೂರು : ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಶತಮಾನಗಳ ಕಾಲ  ಹಿಂದುಳಿದ, ಶೂದ್ರ ವರ್ಗ ಶಿಕ್ಷಣ ಸಂಸ್ಕೃತಿಯಿಂದ ವಂಚಿತವಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಆರ್ಯ ಈಡಿಗರ ಸಂಘ ಅಮೃತ ಮಹೋತ್ಸವ ಹಾಗೂ ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 25 ಪಂಗಡಗಳ ಬೃಹತ್ ಜಾಗೃತ ಸಮಾವೇಶದಲ್ಲಿ ಮಾತನಾಡಿದ ಅವರು ಜಾತಿ ವ್ಯವಸ್ಥೆಯಲ್ಲಿ ಚಲನೆಯಿಲ್ಲ. ಆರ್ಥಿಕ  ಹಾಗೂ ಸಾಮಾಜಿಕ ಚಲನೆಯಿಲ್ಲದ ಸಮಾಜದಲ್ಲಿ ಬದಲಾವಣೆ ಸಾಧ್ಯವಿಲ್ಲ. ಇದಕ್ಕಾಗಿ ಶಿಕ್ಷಣ ಬಹಳ ಮುಖ್ಯ. ನಾರಾಯಣ ಗುರುಗಳು ಶಿಕ್ಷಣಕ್ಕೆ ಒತ್ತು ನೀಡಿದ್ದರು. ಶಿಕ್ಷಣದಿಂದ ತುಳಿತಕ್ಕೊಳಗಾದವರು ಸ್ವಾಭಿಮಾನಿ, ಸಶಕ್ತರಾಗಿ ಜೀವನ ನಡೆಸಲು ಅಸಾಧ್ಯ. ಆದರೆ   ವೈಚಾರಿಕ ಚಿಂತನೆಯ ಗುಣಮಟ್ಟ ಶಿಕ್ಷಣದ ಕೊರತೆ ಇದೆ. ಬಸವಣ್ಣ, ಕನಕದಾಸರು, ನಾರಾಯಣಗುರುಗಳು ಸೇರಿದಂತೆ ಎಲ್ಲ ಮಹನೀಯರ ಆಶಯದಂತೆ ಸಮಾಜದಲ್ಲಿ ಸಮಾನತೆ ಬರಬೇಕು. ಶಿಕ್ಷಣದ ಮೂಲಕ ಆರ್ಥಿಕ, ಸಾಮಾಜಿಕ ಬದಲಾವಣೆ ಬರಬೇಕು ಎಂದರು.

ಯುವಕ

ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿತ್ತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದ ಮುಖ್ಯಮಂತ್ರಿಗಳು  ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಸಮಾಜದ ಬೇಡಿಕೆಗಳನ್ನು ಕುರಿತು ಯಾವುದೇ ಭರವಸೆ ನೀಡಲಾಗುವುದಿಲ್ಲ. ಅಧಿವೇಶನ ಮುಗಿದ ಕೂಡಲೇ ಗಮನಹರಿಸುವುದಾಗಿ ತಿಳಿಸಿದರು.

ದೊಡ್ಡ ಇತಿಹಾಸವಿರುವ ಈಡಿಗ ಸಮುದಾಯ ಹೆಮ್ಮೆ ಪಡಬೇಕು. ದೇವಸ್ಥಾನದೊಳಗೆ ದೇವರ ದರ್ಶನ ಮಾಡಲು ಶೂದ್ರರಿಗೆ  ಅವಕಾಶವಿರಲಿಲ್ಲ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ದೇವರು ಯಾರ ಸ್ವತ್ತಲ್ಲ. ಹಾಗಾಗಿ ನೀವೇ ದೇವಸ್ಥಾನಗಳನ್ನು ಕಟ್ಟಿ ಎಂದು ನಾರಾಯಣಗುರು ಕರೆ ನೀಡಿದ್ದರು. ಕೇರಳ, ಕರಾವಳಿಯಲ್ಲಿ ಅನೇಕ ದೇವಸ್ಥಾನ ಕಟ್ಟಿದ್ದರು. ಈಡಿಗರು, ಬಿಲ್ಲವರೇ ಈ ದೇವಾಲಯದ ಪೂಜಾರಿಗಳಾದರು. ಸಮುದಾಯದವರು ಸಮಾಜ ಸುಧಾರಕರು ನಡೆದ ದಾರಿಯಲ್ಲಿ ನಡೆಯಬೇಕು. ಈ ನಿಟ್ಟಿನಲ್ಲಿ ಸಂಘಟನೆ ಬಹಳ ಮುಖ್ಯ. ಸಂವಿಧಾನ ನೀಡಿದ ಹಕ್ಕುಗಳನ್ನು ಪಡೆದುಕೊಳ್ಳಲು ಜಾಗೃತರಾಗಬೇಕು ಎಂದರು.

ಸಮಾಜದ ಬೇಡಿಕೆ ಈಡೇರಿಸುವಂತೆ ಮನವಿ: ಸಿಎಂ ಭಾಷಣಕ್ಕೂ ಮುನ್ನ  ಆರ್ಯ ಈಡಿಗ ಅಭಿವೃದ್ಧಿ ನಿಗಮಕ್ಕೆ ಸರ್ಕಾರವು 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವಂತೆ ಹಾಗೂ ತಮುದಾಯಕ್ಕೆ ಮತ್ತೊಂದು ಸಚಿವ ಸ್ಥಾನ ನೀಡುವಂತೆ ಆರ್ಯ ಈಡಿಗ ಸಮಾವೇಶದಲ್ಲಿ  ಆಗ್ರಹಿಸಲಾಯಿತು.’

ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ ಹರತಾಳ್ ಹಾಲಪ್ಪ ಮಾತನಾಡಿದರು.  ಆರ್ಯ ಈಡಿಗ ಸಮಾಜದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಯೋಗೇಂದ್ರ ಅವಧೂತರು, ಅರುಣಾನಂದ ಸ್ವಾಮೀಜಿ, ಸತ್ಯಾನಂದ ತೀರ್ಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಮಧು ಬಂಗಾರಪ್ಪ, ಸ್ಯಾಂಡಲ್‌ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಶ್ರೀಮುರಳಿ, ಚಿನ್ನೇಗೌಡ, ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ. ಎಂ. ತಿಮ್ಮೇಗೌಡ, ಶಾಸಕರುಗಳಾದ ಗೋಪಾಲಕೃಷ್ಣ ಬೇಳೂರು, ಭೀಮಣ್ಣ ನಾಯಕ, ಮಾಜಿ ಶಾಸಕ ಹರತಾಳು ಹಾಲಪ್ಪ, ಶಾಸಕ ಹೆಚ್.ಆರ್. ಗವಿಯಪ್ಪ, ಶಾಸಕ ಉಮಾನಾಥ್ ಕೋಟ್ಯನ್, ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ್, ಕುಮಾರ ಬಂಗಾರಪ್ಪ ಸಮಾವೇಶದಲ್ಲಿ ಉಪಸ್ಥಿತರಿದ್ದರು.

ಬಿ.ಕೆ.ಹರಿಪ್ರಸಾದ್ ಗೈರು, ಅಸಮಾಧಾನ: ಸಮಾವೇಶಕ್ಕೆ ಗೈರಾದ ಆರ್ಯ ಈಡಿಗ ಸಮುದಾಯದ ಮುಖಂಡ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಮಾವೇಶ ಆಯೋಜನೆ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

Pragati TV Social Connect for more latest u

Leave a Reply

Your email address will not be published. Required fields are marked *