6 ತಿಂಗಳ ಸ್ಕೆಚ್, ಕಳ್ಳತನ ದಾಳಿ.

6 ತಿಂಗಳ ಸ್ಕೆಚ್, ಕಳ್ಳತನ ದಾಳಿ.

1.8 ಕೆಜಿ ಚಿನ್ನಾಭರಣ, ಡೈಮಂಡ್ ಕಳ್ಳತನ, ಆರೋಪಿ ಬಂಧನ

ಬೆಂಗಳೂರು : ಖತರ್ನಾಕ್​​ ಪ್ಲ್ಯಾನ್​​ ಮಾಡಿ ಮನೆಯೊಂದರಿಂದ ಬರೋಬ್ಬರಿ ಮೂರು ಕೋಟಿ ಬೆಲೆ ಬಾಳುವ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬೆಂಗಳೂರಿನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್  ಆರೋಪಿಯಾಗಿದ್ದು, ಈತ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಟೈಲ್ಸ್ ಕಾಮಗಾರಿ ಮಡುತ್ತಿದ್ದ ಎನ್ನಲಾಗಿದೆ. ಬರೋಬ್ಬರಿ 6 ತಿಂಗಳು ಸ್ಕೆಚ್​​ ಹಾಕಿ ಆರೋಪಿ ಮನೆ ದೋಚಿರುವ ವಿಚಾರವೂ ತನಿಖೆ ವೇಳೆ ಬಯಲಾಗಿದೆ.

ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುಡಿಷಿಯಲ್ ಲೇಔಟ್​​​ನಲ್ಲಿನ ಮನೆ ಮಾಲೀಕರು ಅಮೆರಿಕಾದಲ್ಲಿ ಸೆಟಲ್ ಆಗಿದ್ದರು. ಆರು ತಿಂಗಳಿಗೊಮ್ಮೆ ಅಥವಾ ವರ್ಷಕ್ಕೊಮ್ಮೆ ಮಾತ್ರ ಬೆಂಗಳೂರಿನಲ್ಲಿರುವ ಈ ಮನೆಗೆ ದಂಪತಿ ಬಂದು ಹೋಗ್ತಿದ್ದರು. ಈ ನಡುವೆ ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ವೇಲಾರಾಮ್ ಕಣ್ಣು ಈ ಮನೆಯ ಮೇಲೆ ಬಿದ್ದಿದೆ..

ತನ್ನ ಯೋಜನೆಯಂತೆ ಜೊತೆಯಲ್ಲಿರುವ ಸ್ನೇಹಿತರಿಗೂ ಹೇಳದೆ ಮನೆಯ ಸ್ಲೈಡ್ ಡೋರ್ ಮೂಲಕ ಒಳಗೆ ಎಂಟ್ರಿ ಕೊಟ್ಟಿದ್ದ ವೇಲಾರಾಮ್, ಲಾಕರ್ ಓಪನ್ ಮಾಡಿ ಮೂರು ಕೋಟಿ ಬೆಲೆ ಬಾಳುವ 1 ಕೆಜಿ 800 ಗ್ರಾಂ ಚಿನ್ನಾವಭರಣ, ಡೈಮಂಡ್ ಹಾಗೂ ನಗದು ಕಳ್ಳತನ ಮಾಡಿದ್ದ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಚಿನ್ನಾಭರಣ ಸಿಕ್ಕ ಖುಷಿಗೆ ಯಾರಿಗೂ ಹೇಳದೆ ಸೀದಾ ರಾಜಸ್ಥಾನಕ್ಕೆ ತೆರಳಿ ಮನೆಯಲ್ಲಿ ಚಿನ್ನಾಭರಣ ಬಚ್ಚಿಟ್ಟಿದ್ದ. ಈ ನಡುವೆ ಮನೆಯ ಸಿಸಿಟಿವಿಯನ್ನ ಅಮೆರಿಕಾದಲ್ಲಿದ ದಂಪತಿ ಮೊಬೈಲ್ ಮೂಲಕ ಪರಿಶೀಲನೆ ನಡೆಸಿದಾಗ ಕಳ್ಳತನ ನಡೆದಿರೋ ವಿಷಯ ಗೊತ್ತಾಗಿದೆ. ಘಟನೆ ಸಂಬಂಧ ಸಂಬಂಧಿಕರ ಮೂಲಕ ಪೊಲೀಸರಿಗೆ ದೂರು ನೀಡಿದ್ದು, ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಆರೋಪಿ ವೇಲಾರಾಮ್​​ನ ಪೊಲೀಸರೀಗ ಬಂಧಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *