6ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
ಪಾಟ್ನಾ : ಬಿಹಾರದ ನಳಂದದಲ್ಲಿರುವ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ ಉಂಟಾಗಿದ್ದು, 8 ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಚೈತ್ರ ಮಾಸದ ಕೊನೆಯ ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು.
ಅಪಘಾತದಿಂದ ಮಹಿಳೆಯರು ಸೇರಿದಂತೆ ಅನೇಕ ಜನರು ತೊಂದರೆಗೀಡಾಗಿದ್ದಾರೆ. ದುರಂತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ, ಗ್ರಾಮಸ್ಥರೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ನಡೆಸಿದರು. ಕಳೆದ ವರ್ಷ, ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿಯಂದು ಕಾಲ್ತುಳಿತ ಉಂಟಾಗಿ 9 ಮಂದಿ ಭಕ್ತರು ಉಸಿರು ಚೆಲ್ಲಿದ್ದರು.
For More Updates Join our WhatsApp Group :



