ಆಟವಾಡುತ್ತಾ ಬಾವಿಗೆ ಬಿದ್ದ 8ರ ಬಾಲಕಿ ಸಾ*

8-year-old girl dies after falling into well while playing

ವಿಜಯಪುರ: ಆಟವಾಡಲು ಹೋಗಿ ಬಾಲಕಿಯೋರ್ವಳು ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧನಸಿಂಗ್ ತಾಂಡಾದಲ್ಲಿ ಘಟನೆ ನಡೆದಿದೆ

ಅರ್ಚನಾ ದೀಪಕ್ ರಾಠೋಡ (8) ಮೃತ ಬಾಲಕಿ. ಸೋಮವಾರ ಸಂಜೆ ಬಾಲಕಿ ತನ್ನ ತಾಯಿಯೊಂದಿಗೆ ಕುರಿ ಮೇಯಿಸಲು ಹೋಗಿದ್ದಳು. ಈ ವೇಳೆ ಆಟವಾಡುತ್ತಿದ್ದ ಬಾಲಕಿ ಆಯಾತಪ್ಪಿ ಬಾವಿಗೆ ಬಿದ್ದಿದ್ದಾಳೆ.

ಬಾಲಕಿ ಬಾವಿಗೆ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿ ಸದ್ಯ ಬಾಲಕಿಯ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಈ ಕುರಿತು ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *