ಬೆಂಗಳೂರು: ವಿಧಾನಸಭಾ ಅಧಿವೇಶನದ ಮೂರನೇ ದಿನವಾಗಿರುವ ಇಂದು ಜೆಡಿಎಸ್ ಶಾಸಕ ಸಿಬಿ ಸುರೇಶ್ ಬಾಬು ಅವರು ಬಹಳ ಮಹತ್ತರವಾದ ವಿಷಯಗಳನ್ನು ಸದನದ ಗಮನಕ್ಕೆ ತಂದು ಸಂಬಂಧಪಟ್ಟ ಸಚಿವರಿಂದ ಉತ್ತರ ಬಯಸಿದರು. ಅವರು ಹೇಳುವ ಪ್ರಕಾರ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗಿದ್ದು ಇದು ಬಹಳ ಆಘಾತಕಾರಿ ಮತ್ತಿ ಕಳವಳಕಾರಿ ಅಂಶವೆಂದು ಹೇಳಿದರು.
ಹಾಗೆಯೇ ರಾಜ್ಯದಲ್ಲಿ ಕಳೆದ 4 ತಿಂಗಳು ಆವಧಿಯಲ್ಲಿ 929 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವುದು ಮತ್ತಷ್ಟು ಗಂಭೀರವಾದ ವಿಷಯವಾಗಿದೆ ಎಂದ ಸುರೇಶ್ ಬಾಬು ಇವುಗಳನ್ನು ತಡೆಗಟ್ಟಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಚಿವೆಯನ್ನು ಕೇಳಿದರು.
For More Updates Join our WhatsApp Group :