ನವದೆಹಲಿ: 2024ರ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಸದ್ಯ ಎನ್ಡಿಎ ಹಾಗೂ ಇಂಡಿಯಾ ಒಕ್ಕೂಟದ ನಡುವೆ ಟಫ್ ಫೈಟ್ ಶುರುವಾಗಿದೆ.
ಬೆಳಗ್ಗೆ 9:45ರ ವೇಳೆಗೆ ಎನ್ಡಿಎ 295, ಇಂಡಿಯಾ ಒಕ್ಕೂಟ 214 ಹಾಗೂ ಇತರೇ ಪಕ್ಷಗಳು 29 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ಉತ್ತರ ಪ್ರದೇಶದ ಹೈವೋಲ್ಟೇಜ್ ಕ್ಷೇತ್ರಗಳಾಗಿದ್ದ ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರು ಸತತವಾಗಿ ಹಿನ್ನಡೆ ಅನುಭವಿಸಿದ್ದರೆ, ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದರೊಂದಿಗೆ ಯುಪಿನಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ ಕಾಯ್ದುಕೊಂಡಿದೆ. ಇನ್ನೂ ಗುಜಜರಾತ್, ರಾಜಸ್ಥಾನ, ಹರಿಯಾಣ ಹಾಗೂ ಒಡಿಶಾ ರಾಜ್ಯಗಳಲ್ಲಿ ಎನ್ಡಿಎ ಆರಂಭಿಕ ಮುನ್ನಡೆಯಲ್ಲಿದ್ದು, ಇಂಡಿಯಾ ಕೂಟ ಸಹ ಟಫ್ ಫೈಟ್ ನೀಡುತ್ತಿದೆ
ಕರ್ನಾಟಕದಲ್ಲಿ ಬಿಜೆಪಿ 19, ಜೆಡಿಎಸ್ 3 ಹಾಗೂ ಕಾಂಗ್ರೆಸ್ 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ