ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, SIT ಪೊಲೀಸರು ಬಸವನಗುಡಿ ನಿವಾಸಕ್ಕೆ ಅವರನ್ನು ಕರೆತಂದು ಮಹಜರು ನಡೆಸಿದ್ದಾರೆ
ಪ್ರಜ್ವಲ್ ರೇವಣ್ಣ ಅವರನ್ನು ಸ್ಥಳ ಮಹಜರಿಗೆ ಕರೆತಂದ ವೇಳೆ ಅವರ ತಾಯಿ ಭವಾನಿ ರೇವಣ್ಣ ಮನೆಯ ಮೊದಲ ಮಹಡಿಯಲ್ಲಿರುವ ತುಳಸಿಕಟ್ಟೆಗೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಅಧಿಕಾರಿಗಳು ಮಹಜರು ಮುಕ್ತಾಯವಾಗುವವರೆಗೂ ಮನೆಯ ಪ್ರತ್ಯೇಕ ಜಾಗದಲ್ಲಿ ಇರುವಂತೆ ಮನೆಯ ಸದಸ್ಯರಿಗೆ ಸೂಚಿಸಿದರು. ಅಲ್ಲದೇ ಪ್ರಜ್ವಲ್‍ರನ್ನು ಭೇಟಿಯಾಗಲು ಮನೆಯ ಸದಸ್ಯರಿಗೆ ಅವಕಾಶ ನೀಡಲಿಲ್ಲ
ಹೇಳಿಕೆ ದಾಖಲಿಸಿಕೊಳ್ಳಲು ಅಧಿಕಾರಿಗಳು ಪ್ರಿಂಟರ್ ಹಾಗೂ ಕಂಪ್ಯೂಟರ್ ತೆಗೆದುಕೊಂಡು ಹೋಗಿದ್ದಾರೆ. ಇನ್ನೂ ಮಹಜರು ಕಾರ್ಯ ನಡೆಯುತ್ತಿದ್ದು, ಪ್ರಕರಣ ಸಂಬಂಧ ಮಹತ್ವದ ಸಾಕ್ಷ್ಯಗಳನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ.
ಬಂಧನಕ್ಕೊಳಗಾಗಿರುವ ಆರೋಪಿ ಪ್ರಜ್ವಲ್ ಹಲವು ಮಹಿಳೆಯ ಜೊತೆ ಇದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿತ್ತು. ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಅವರು ಜರ್ಮನಿಗೆ ತೆರಳಿ ತಲೆಮರೆಸಿಕೊಂಡಿದ್ದರು. ಸುಮಾರು 34 ದಿನಗಳ ಕಾಲ ಯಾರ ಸಂಪರ್ಕಕ್ಕೂ ಸಿಗದೇ ಜರ್ಮನಿಯಲ್ಲಿದ್ದರು. ಬಳಿಕ ಭಾರತಕ್ಕೆ ಮರಳುತ್ತಿದ್ದಂತೆ ಎಸ್‍ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.