ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಆರೋಪದಡಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಒಟ್ಟು 13 ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ವೈದ್ಯಕೀಯ ಪರೀಕ್ಷೆ ಮುಗಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಆರೋಪಿತರನ್ನು ಪೊಲೀಸರು ತಮ್ಮ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಆಸ್ಪತ್ರೆ ಬಳಿ ಮುಂಜಾಗ್ರತ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.
ಇದಕ್ಕೂ ಮುನ್ನ ದರ್ಶನ್ ಪರ ವಕೀಲ ನಾರಾಯಣಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿಲ್ಲ, ವಿಚಾರಣೆಗಾಗಿ ಮಾತ್ರ ಕರೆದಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೆ ವಿಚಾರಣೆಯಲ್ಲಿ ಕೊಲೆ ಆರೋಪ ಮೆಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಪವಿತ್ರಾರನ್ನು ಬಂಧಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ