ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಡಿಸಿಎಂ ಆಗಿ ಪವನ್‌ ಕಲ್ಯಾಣ್‌ ಪ್ರಮಾಣವಚನ ಸ್ವೀಕಾರ

ವಿಜಯವಾಡ: ಟಿಡಿಪಿ ಮುಖ್ಯಸ್ಥ ನಾರಾ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ನೂತನ ಸಿಎಂ ಆಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು

ಪ್ರಧಾನಿ ನರೇಂದ್ರ ಮೋದಿಯವರನ್ನು ಆಲಿಂಗನದ ಮೂಲಕ ಚಂದ್ರಬಾಬು ನಾಯ್ಡು ಸ್ವಾಗತಿಸಿದರು. ನಂತರ ನಾಯ್ಡು ಅವರು ಮುಖ್ಯಮಂತ್ರಿಯಾಗಿ 4ನೇ ಬಾರಿ ಪ್ರಮಾಣವಚನ ಸ್ವೀಕರಿಸಿದರು. ನಂತರ, ಪವನ್ ಕಲ್ಯಾಣ್ ಅವರು ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು

ಇವರೊಂದಿಗೆ 24 ಮಂದಿ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಅಬ್ದುಲ್ ನಜೀರ್ ಅವರು ಸಿಎಂ, ಡಿಸಿಎಂ ಹಾಗು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು

ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಸಿಎಂಗಳು, ಪ್ರಮುಖ ನಟರಾದ ಚಿರಂಜೀವಿ, ರಜನಿಕಾಂತ್ ಸೇರಿದಂತೆ ಪ್ರಮುಖ ಗಣ್ಯರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದರು.

ಗನ್ನವರಂ ಮಂಡಲದ ಕೇಸರಪಲ್ಲಿಯಲ್ಲಿ 11.18 ಎಕರೆ ಜಾಗದಲ್ಲಿ ಬೃಹತ್​​ ವೇದಿಕೆ ಸಿದ್ಧಪಡಿಸಲಾಗಿದೆ. ವೇದಿಕೆಯನ್ನು ಎಲ್ಲರೂ ನೋಡುವಂತೆ 36 ಗ್ಯಾಲರಿಗಳಲ್ಲಿ ಎಲ್​​ಇಡಿ ಪರದೆಗಳನ್ನು ಅಳವಡಿಸಲಾಗಿದೆ. ವಿಐಪಿಗಳಿಗಾಗಿಯೇ ನಾಲ್ಕು ಗ್ಯಾಲರಿಗಳನ್ನು ವಿಶೇಷವಾಗಿ ಸಿದ್ಧಪಡಿಸಲಾಗಿದೆ

Leave a Reply

Your email address will not be published. Required fields are marked *