ಶಿವಮೊಗ್ಗ : ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇದೀಗ ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಗೆ ಡೆಂಗ್ಯೂ ಜ್ವರ ದೃಢಪಟ್ಟಿದ್ದು, ಕೂಡಲೇ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲವೆಂದು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಾಗರ ತಾಲೂಕಿನ ತಾಳಗುಪ್ಪ ಹೊಂಕೇರಿಯವರಾದ ನಾಗರಾಜ್ ರವರು ಡೆಂಗ್ಯೂ ತೀವ್ರತರ ಜ್ವರದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.