ಪದವೀಧರರಿಗೆ SEBIಯಲ್ಲಿದೆ ಉದ್ಯೋಗಾವಕಾಶ : ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನ

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ)ಯಿಂದ 97 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಫೀಸರ್​​ ಗ್ರೇಡ್​ ‘ಎ’ ಸಹಾಯಕ ಮ್ಯಾನೇಜರ್​ ಹುದ್ದೆಗಳು ಇವಾಗಿವೆ. ಅರ್ಹ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

ಹುದ್ದೆ ವಿವರ: ಒಟ್ಟು 97 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

  • ಜನರಲ್​ – 62
  • ಲೀಗಲ್​ – 5
  • ಮಾಹಿತಿ ತಂತ್ರಜ್ಞಾನ -24
  • ಇಂಜಿನಿಯರಿಂಗ್​ (ಎಲೆಕ್ಟ್ರಿಕಲ್​) -2
  • ಸಂಶೋಧನೆ -2
  • ಅಧಿಕೃತ ಭಾಷೆ – 2

ವಿದ್ಯಾರ್ಹತೆ: ಜನರಲ್​ ಹುದ್ದೆಗೆ ಕಾನೂನು ಪದವಿ, ಇಂಜಿನಿಯರಿಂಗ್​, ಸ್ನಾತಕೋತ್ತರ ಪದವಿಯಾಗಿರಬೇಕು. ಲೀಗಲ್​ ಪದವಿಗೆ ಕಾನೂನು ಪದವಿ, ಮಾಹಿತಿ ತಂತ್ರಜ್ಞಾನ ಹುದ್ದೆಗೆ ಇಂಜಿನಿಯರಿಂಗ್​ ಪದವಿ, ಇಂಜಿನಿಯರಿಂಗ್​ (ಎಲೆಕ್ಟ್ರಿಕಲ್​) ಹುದ್ದೆಗೆ ಎಲೆಕ್ಟ್ರಿಕಲ್​ ಇಂಜಿನಿಯರಿಂಗ್​ ಪದವಿ, ಸಂಶೋಧನೆ ಹಾಗೂ ಅಧಿಕೃತ ಭಾಷೆ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಗರಿಷ್ಠ ವಯೋಮಿತಿ 30 ವರ್ಷ ಆಗಿದೆ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ವಿಶೇಷಚೇತನ ಅಭ್ಯರ್ಥಿಗಳಿಗೆ 100 ಮತ್ತು ಒಬಿಸಿ, ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಜೂನ್​ 11ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 30 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು sebi.gov.in ಭೇಟಿ ನೀಡಿ.

Leave a Reply

Your email address will not be published. Required fields are marked *