ವಯಾನಾಡು ಉಪಚುನಾವಣೆ || ಸ್ಪರ್ಧಿಸಲು ನನಗೇನು ಭಯವಿಲ್ಲ : ಪ್ರಿಯಾಂಕ ವಾದ್ರಾ

ನವದೆಹಲಿ: ಸಹೋದರ ರಾಹುಲ್ ಗಾಂಧಿ ಅವರಿಂದ ತೆರವಾಗಿರುವ ವಯನಾಡ್ ಉಪ ಚುನಾವಣೆ ಮೂಲಕ ಚೊಚ್ಚಲ ಚುನಾವಣೆ ಎದುರಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ಸಜ್ಜಾಗಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದಾಗಿನಿಂದ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎದುರಾಳಿಯಾಗುವ ಸಾಧ್ಯತೆ ಹಾಗೂ ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿ ಎಂದು ಬಿಂಬಿಸಲ್ಪಟ್ಟಿದ್ದರು. ಆದರೆ, ಅದು ಆಗಿರಲಿಲ್ಲ. ಇದೀಗ ಅವರ ಸಹೋದರ ರಾಹುಲ್ ಗಾಂಧಿ ಸತತ ಎರಡನೇ ಅವಧಿಗೆ ಗೆದ್ದಿರುವ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. 

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ನನಗೆ ಸ್ವಲ್ಪವೂ ಆತಂಕವಿಲ್ಲ. ವಯನಾಡ್ ಪ್ರತಿನಿಧಿಸಲು ಸಾಧ್ಯವಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ವಯನಾಡ್ ಜನತೆ ರಾಹುಲ್ ಅನುಪಸ್ಥಿತಿಯನ್ನು ಅನುಭವಿಸಲು ಬಿಡುವುದಿಲ್ಲ ಎಂದಿದ್ದಾರೆ.

ರಾಯ್ ಬರೇಲಿಯಲ್ಲಿಯೂ ಉತ್ತಮ ಸಂಬಂಧವನ್ನು ಹೊಂದಿದ್ದೇನೆ ಏಕೆಂದರೆ. 20 ವರ್ಷಗಳಿಂದ ಅಲ್ಲಿ ಕೆಲಸ ಮಾಡಿದ್ದೇನೆ ಮತ್ತು ಆ ಸಂಬಂಧವು ಎಂದಿಗೂ ಮುರಿಯುವುದಿಲ್ಲ ಎಂದು ಹೇಳಿದರು.

ಪ್ರಿಯಾಂಕಾ ವಾದ್ರಾ ಅವರು ಲೋಕಸಭೆ ಚುನಾವಣೆ ಪೂರ್ವದಲ್ಲಿ ಅಮೇಥಿಯಿಂದ ಸ್ಪರ್ಧಿಸಲು ಪದೇ ಪದೇ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದರು. ಅಂತಿಮವಾಗಿ ಈ ಸ್ಥಾನವನ್ನು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರನ್ನು ಸೋಲಿಸಿದ ಕುಟುಂಬದ ನಿಷ್ಠಾವಂತ ಕಿಶೋರಿ ಲಾಲ್ ಶರ್ಮಾ ಅವರಿಗೆ ನೀಡಲಾಗಿತ್ತು. ಲೋಕಸಭೆ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗೆದ್ದರೆ, ಇದೇ ಮೊದಲಿಗೆ ಗಾಂಧಿ ಕುಟುಂಬದ ಮೂವರು ಸದಸ್ಯರು ಸಂಸತ್ತಿಗೆ ಬರಲಿದ್ದಾರೆ. ತಾಯಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯೆಯಾಗಿದ್ದಾರೆ

Leave a Reply

Your email address will not be published. Required fields are marked *