ಪೊಲೀಸರ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟ ನಟ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಕೊನೆಗೂ ಖಾಕಿ ಎದುರು ಸತ್ಯ ಬಾಯ್ಬಿಟ್ಟಿದ್ದಾರೆ

ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ನೋಡಿಕೊಳ್ಳಲು 30 ಲಕ್ಷ ರೂ. ನೀಡಿರುವು ದರ್ಶನ್ ಹೇಳಿರುವ ಸ್ವ-ಇಚ್ಛಾ ಹೇಳಿಕೆಯನ್ನು ಪೊಲೀಸರು ರಿಮ್ಯಾಂಡ್ ಕಾಪಿಯಲ್ಲಿ ದಾಖಲಿಸಿದ್ದಾರೆ.

ಪ್ರಕರಣದ ವಿಚಾರಣೆ ವೇಳೆ ದರ್ಶನ್, ಕೊಲೆಯಾದ ರೇಣುಕಾಸ್ವಾಮಿ ಮೃತದೇಹವನ್ನ ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಲು ಡೀಲ್ ಕೊಟ್ಟಿದ್ದಾಗಿ ಒಪ್ಪಿಕೊಂಡಿದ್ದಾರೆ. ಪೊಲೀಸ್, ಲಾಯರ್ ಮತ್ತು ಶವ ಸಾಗಿಸೋ ವ್ಯಕ್ತಿಗಳಿಗೆ ತಗುಲುವ ವೆಚ್ಚವನ್ನ ಬರಿಸಲು ಪ್ರದೋಶ್‌ಗೆ 30 ಲಕ್ಷ ರೂ. ಹಣ ನೀಡಿರೋದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಬೆಂಗಳೂರಿನ ಜಯಣ್ಣ ಶೆಡ್, ಮೈಸೂರಿನ ಹೋಟೆಲ್ ಮತ್ತು ಫಾರ್ಮ್ಹೌಸ್‌ನಲ್ಲಿ ಪೊಲೀಸರು ಮಹಜರು ನಡೆಸಿದ್ದಾರೆ. ಮೂರು ಬೈಕ್ ಸೀಜ್ ಮಾಡಿದ್ದಾರೆ. ಸರಿಯಾಗಿ ಊಟ ಮಾಡದ ಕಾರಣ ಅಸ್ವಸ್ಥರಾಗಿದ್ದ ನಟಿ ಪವಿತ್ರಾಗೌಡಗೆ (Pavitra Gowda) ಮಲ್ಲತ್ತಹಳ್ಳಿ ಬಿಬಿಎಂಪಿ ಆಸ್ಪತ್ರೆಯಲ್ಲಿ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ

ಇನ್ನು, ಕ್ರೈಂ ಸೀನ್‌ನಲ್ಲಿಯೇ ಇಲ್ಲದ ಕೇಶವಮೂರ್ತಿ, ನಿಖಿಲ್ ಮತ್ತು ಕಾರ್ತಿಕ್ 30 ಲಕ್ಷ ರೂ. ಆಸೆಗಾಗಿ ಕೊಲೆ ಆರೋಪ ಹೊತ್ತು ಪೊಲೀಸರ ಮುಂದೆ ಶರಣಾಗಿದ್ದ ವಿಚಾರವೂ ಬೆಳಕಿಗೆ ಬಂದಿದೆ. ಈ ಮಧ್ಯೆ, ಪ್ರಕರಣದಲ್ಲಿ ಯಾವುದೇ ಒತ್ತಡ ಇಲ್ಲ. ಪೊಲೀಸರು ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ ಎಂದು ಪೊಲೀಸ್ ಕಮೀಷನರ್ ದಯಾನಂದ್ ಸ್ಪಷ್ಟಪಡಿಸಿದ್ದಾರೆ. ಅತ್ತ, ಚಿತ್ರದುರ್ಗದಲ್ಲಿ ಮೃತ ರೇಣುಕಾಸ್ವಾಮಿ ನಿವಾಸಕ್ಕೆ ಸಚಿವರಾದ ಪರಮೇಶ್ವರ್, ಡಿ ಸುಧಾಕರ್, ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

Leave a Reply

Your email address will not be published. Required fields are marked *