ಮೆಕ್ಕಾದಲ್ಲಿ ಮಿತಿಮೀರಿದ ತಾಪಮಾನ : 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು

ಜೆರುಸಲೇಂ: ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದ 550ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್‌ ಯಾತ್ರೆಗೆ ತೆರಳಿದ್ದರು

ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮೆಕ್ಕಾದ ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಹಜ್‌ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್‌ ರಾಜತಾಂತ್ರಿಕರು ತಿಳಿಸಿದ್ದಾರೆ

ಈ ವರ್ಷ ಸುಮಾರು 18 ಲಕ್ಷ ಯಾತ್ರಾರ್ಥಿಗಳು ಹಜ್‌ ಯಾತ್ರೆಯಲ್ಲಿ ಭಾಗವಹಿಸಿದ್ದರು, ಅವರಲ್ಲಿ 16 ಲಕ್ಷ ಯಾತ್ರಿಕರು ವಿವಿಧ ದೇಶಗಳಿಂದ ಬಂದಿದ್ದರು ಎಂದು ರಾಜತಾಂತ್ರಿಕರು ತಿಳಿಸಿದ್ದಾರೆ

ತ್ಯಾಗ, ಬಲಿದಾನಗಳ ಸಂಕೇತವಾಗಿರುವ ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರು ಒಮ್ಮೆಯಾದರೂ ಹಜ್‌ ಯಾತ್ರೆಯನ್ನು ಪೂರ್ಣಗೊಳಿಸಬೇಕು ಎಂದು ಭಾವಿಸುತ್ತಾರೆ. ಆದ್ರೆ ಈ ಬಾರಿ ಮೆಕ್ಕಾದಲ್ಲಿ ಬಿಸಿಲಿನ ತಾಪಮಾನ ಏರಿಕೆಯಿಂದ ನೂರಾರು ಜನ ಮೃತಪಟ್ಟಿದ್ದಾರೆ,

ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ (125 ಫ್ಯಾರನ್‌ಹೀಟ್) ಕಂಡುಬಂದಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ. ತಾಪಮಾನ ಏರಿಕೆ ಸಂದರ್ಭದಲ್ಲಿ ಕೆಲವರು ಮೈಮೇಲೆ ನೀರು ಸುರಿದುಕೊಂಡು ಪ್ರಾಣ ಉಳಿಸಿಕೊಂಡಿರುವ ದೃಶ್ಯಗಳು ಕಂಡುಬಂದಿದೆ.

Leave a Reply

Your email address will not be published. Required fields are marked *