ನವದೆಹಲಿ: ‘ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಅಭ್ಯಂತರವಿಲ್ಲ. ಆದರೆ, ಈ ಕುರಿತು ಎಲ್ಲಾ ರಾಜ್ಯಗಳು ಒಮ್ಮತದ ನಿರ್ಧಾರ ಕೈಗೊಳ್ಳಬೇಕಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಎಂಟು ತಿಂಗಳ ಬಳಿಕ ಶನಿವಾರ ನಡೆದ ಜಿಎಸ್‌ಟಿ ಮಂಡಳಿಯ 53ನೇ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು, ”ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಅವರು ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿ ಇದಕ್ಕೆ ಅವಕಾಶ ಕಲ್ಪಿಸಿದ್ದಾರೆ.
ರಾಜ್ಯಗಳು ಪರಸ್ಪರ ಚರ್ಚಿಸಬೇಕಿದೆ. ರಾಜ್ಯಗಳು ಒಪ್ಪಿಗೆ ನೀಡಿದ ತಕ್ಷಣವೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ವಿಷಯ ಮಂಡಿಸಲಾಗುವುದು. ಬಳಿಕ ಯಾವ ಹಂತದ ತೆರಿಗೆ ವ್ಯಾಪ್ತಿಗೆ ಸೇರಿಸಬೇಕು ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದರು