ನವದೆಹಲಿ: ಏಳು ಬಾರಿ ಸಂಸದರಾಗಿ ಆಯ್ಕೆಯಾದ ಭರ್ತೃಹರಿ ಮಹತಾಬ್ ಅವರು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭವು 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭಕ್ಕೆ ಮುನ್ಸೂಚನೆ ನೀಡಿತು. ಇಂದಿನ ಅಧಿವೇಶನವು ಹೊಸ ಸಂಸದರ ಪ್ರಮಾಣ ವಚನ ಸ್ವೀಕಾರದೊಂದಿಗೆ ಪ್ರಾರಂಭವಾಗುತ್ತದೆ.
18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, “ಸಂಸದೀಯ ಪ್ರಜಾಪ್ರಭುತ್ವದಲ್ಲಿ, ಇಂದು ಅದ್ಭುತವಾದ ದಿನವಾಗಿದೆ. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ನಮ್ಮ ಸ್ವಂತ ಹೊಸ ಸಂಸತ್ತಿನ ಕಟ್ಟಡದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ಈ ಮಹತ್ವದ ದಿನದಂದು ಹೊಸದಾಗಿ ಚುನಾಯಿತರಾದ ಎಲ್ಲ ಸಂಸದರಿಗೆ ನಾನು ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ಅವರಿಗೆ ಶುಭಾಶಯಗಳನ್ನು ತಿಳಿಸುತ್ತೇನೆ” ಎಂದು ಹೇಳಿದರು
ಇಂದು ನಡೆಯಲಿರುವ 18ನೇ ಲೋಕಸಭೆಯ ಮೊದಲ ಅಧಿವೇಶನ ಪ್ರಾರಂಭವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಆಗಮಿಸಿದರು.