DCET-2024ರ ತಾತ್ಕಾಲಿಕ ಸರಿ ಉತ್ತರ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಅವಕಾಶ

KEA Notification: Allied Health Science, M.Pharm, Pharm-D Entrance Exam Details | Education News

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಡಿಸಿಇಟಿ-2024ರ ತಾತ್ಕಾಲಿಕ ಸರಿ ಉತ್ತರಗಳನ್ನು ತನ್ನ ವೆಬ್‌ಸೈಟ್ http://kea.kar.nic.inನಲ್ಲಿ ಪ್ರಕಟಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ, ತಾತ್ಕಾಲಿಕ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ಜೂನ್ 26ರ ಬೆಳಗ್ಗೆ 11ರೊಳಗಾಗಿ ಸಲ್ಲಿಸಬಹುದು ಎಂದು ಸೂಚಿಸಿದ್ದಾರೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಯ ವಿವರಗಳನ್ನು ನಮೂದಿಸಿ, ಅದಕ್ಕೆ ಪೂರಕ ಸಮರ್ಥನೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *