New Criminal Law || ಮೊದಲ ದಿನವೇ ಬೆಂಗಳೂರಿನಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?

ಬೆಂಗಳೂರು: ದೇಶಾದ್ಯಂತ ಜಾರಿಯಾಗಿರುವ ನೂತನ ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ಮೊದಲನೇ ದಿನ (ಜುಲೈ 1) ಬೆಂಗಳೂರು ನಗರದಲ್ಲಿ ಒಟ್ಟು 38 ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದರು.

ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೂತನ ಕಾನೂನಿನನ್ವಯ ಬೆಂಗಳೂರು ನಗರದಲ್ಲಿ ಮೊದಲನೇ ದಿನ ಸುಗಮ ಹಾಗೂ ಸುಸೂತ್ರವಾಗಿ ಪ್ರಕರಣಗಳನ್ನ ದಾಖಲಿಸಿಕೊಳ್ಳಲಾಗಿದ್ದು, ಯಾವುದೇ ರೀತಿಯ ಕಾನೂನಿನ ಅಡಚಣೆಯಾಗಲಿ, ತಾಂತ್ರಿಕ ಸಮಸ್ಯೆಯಾಗಲಿ ಆಗಿಲ್ಲ ಎಂದು ಅವರು ತಿಳಿಸಿದರು.

ಸೋಮವಾರ ಬೆಂಗಳೂರಿನಲ್ಲಿ ಒಟ್ಟು 38 ಪ್ರಕರಣಗಳು ದಾಖಲಾಗಿವೆ. ಆ ಪೈಕಿ ಭಾರತೀಯ ನ್ಯಾಯ ಸಂಹಿತೆಯಡಿ 31, ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ 7 ಪ್ರಕರಣಗಳು ದಾಖಲಾಗಿವೆ ಎಂದು ಆಯುಕ್ತರು ವಿವರಿಸಿದರು.

ಜುಲೈ 1ರಿಂದ ದೇಶಾದ್ಯಂತ ಅನುಷ್ಠಾನಕ್ಕೆ ಬಂದಿರುವ ನೂತನ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023, ಭಾರತೀಯ ಸಾಕ್ಷ್ಯ ಅಧಿನಿಯಮ-2023ರ ಕುರಿತು ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ 7 ವಲಯಗಳು, 6 ಕಮೀಷನರೇಟ್ ಘಟಕಗಳು ಹಾಗೂ 1063 ಪೊಲೀಸ್ ಠಾಣೆಗಳು ಸೇರಿದಂತೆ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿತ್ತು

Leave a Reply

Your email address will not be published. Required fields are marked *