ಕಬಿನಿ ಜಲಾಶಯ ಬಹುತೇಕ ಭರ್ತಿ : ರೈತರಲ್ಲಿ ಹರ್ಷ

ಮೈಸೂರು: ನೆರೆಯ ಕೇರಳದ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ. ಇದೀಗ ಜಲಾಶಯ ಸಂಪೂರ್ಣ ಭರ್ತಿಯಾಗಲು 5 ಅಡಿಗಳಷ್ಟು ನೀರು ಮಾತ್ರ ಬಾಕಿಯಿದೆ. ಜಲಾಶಯ ಭರ್ತಿಯಾಗುತ್ತಿರುವ ರೈತರಲ್ಲಿ ಸಂತಸ ತಂದಿದೆ.

ಬುಧವಾರ ಜಲಾಶಯದ ನೀರಿನ ಮಟ್ಟ 2,279.54 ಅಡಿಗಳಷ್ಟಿತ್ತು, ಪೂರ್ಣ ಜಲಾಶಯದ ಮಟ್ಟ 2,284 ಅಡಿಗಳಷ್ಟಿದೆ. ಕಬಿನಿ ಜಲಾಶಯವು ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲ್ಲೂಕಿನಲ್ಲಿದ್ದು, ಮುಂದಿನ ವಾರ ಜಲಾಶಯ ಸಂಪೂರ್ಣ ಭರ್ತಿಯಾಗುವ ನಿರೀಕ್ಷೆಗಳಿವೆ ಎಂದು ಮೂಲಗಳು ತಿಳಿಸಿವೆ.

ಕೇರಳ ಮತ್ತು ಕರ್ನಾಟಕದ ಗಡಿ ಭಾಗಗಳಲ್ಲಿ ಮುಂಗಾರು ಸಕ್ರಿಯವಾಗಿದ್ದು, ಇದರ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ ನಿರಂತರ ಹೆಚ್ಚಳವಾಗುತ್ತಿದೆ. ಕಬಿನಿ ರೈತರ ಜೀವನಾಡಿಯಾಗಿದ್ದು. ಜಲಾಶಯ ಭರ್ತಿಯಾಗುತ್ತಿರುವುದು ರೈತರಲ್ಲಿ ಹರ್ಷ ತಂದಿದೆ.

Leave a Reply

Your email address will not be published. Required fields are marked *