ಬೆಂಗಳೂರು: ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಕ್ಕಳೊಂದಿಗೆ ಸಂವಾದ ನಡೆಸಿದರು.
ಎಸ್‌ಸಿ, ಎಸ್‌ಟಿ ಪರಿಷತ್ ಸಭೆ ನಡೆಸಿದ ನಂತರ ನೇರವಾಗಿ ಶಾಲೆಗೆ ತೆರಳಿದ ಸಿಎಂ. 250 ವಿದ್ಯಾರ್ಥಿಗಿರುವ ಚಾಮರಾಜಪೇಟೆಯ ಮೊರಾರ್ಜಿ ಶಾಲೆಗೆ ಭೇಟಿ ನೀಡಿ, ಮೊದಲಿಗೆ 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಪಠ್ಯಪುಸ್ತಕ, ಬಾತ್ ರೂಂ ಕಿಟ್‌ಗಳ ಸಮರ್ಪಕ ವಿತರಣೆ ಬಗ್ಗೆ ಮಾಹಿತಿ ಪಡೆದರು. ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು. ಆಗಾಗ ಪಲಾವ್ ಕೊಡುತ್ತಾರೆಂದು ವಿದ್ಯಾರ್ಥಿಗಳು ಖುಷಿಪಟ್ಟರು.
ಶಾಲೆಯಲ್ಲಿ ಕಳೆದ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಒಬ್ಬ ವಿಧ್ಯಾರ್ಥಿನಿ ಮಾತ್ರ ಸೆಕೆಂಡ್ ಬಂದಿದ್ದಾಗಿ ಶಿಕ್ಷಕರು ವಿವರಣೆ ನೀಡಿದರು. ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ ಎಂದು ಸಿಎಂಗೆ ವಿದ್ಯಾರ್ಥಿಗಳು ತಿಳಿಸಿದರು.