ಬೆಂಗಳೂರು: ಡೆಂಗ್ಯೂ ಜ್ವರ ಪತ್ತೆ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಕಡೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 22 ಲ್ಯಾಬ್ಗಳಿಗೆ ನೋಟಿಸ್ ನೀಡಿದ್ದಾರೆ.
ಡೆಂಗ್ಯೂ ಚಿಕಿತ್ಸೆಗಾಗಿ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿಯಾಗಿ ದರ ಪಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಗುರುವಾರ ಕೆ.ಪಿ.ಎಂ.ಇ ನೋಡಲ್ ಅಧಿಕಾರಿಗಳ ತಂಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ 31 ಖಾಸಗಿ ಸಂಸ್ಥೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿವಿಧ ಆಸ್ಪತ್ರೆ ಹಾಗೂ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿದಾಗ, ಅದರಲ್ಲಿ 22 ಲ್ಯಾಬ್ನಲ್ಲಿ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿಯಾಗಿ ಹಣ ಪಡೆದ ಹಿನ್ನೆಲೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ ಹಾಗೂ ಕೆಪಿಎಂಇ ಅಧಿನಿಯಮದಂತೆ ನೋಟಿಸ್ ನೀಡಲಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.