ಬೆಂಗಳೂರು: ಮಳೆಗಾಲ ಶುರುವಾಗುತ್ತಿದ್ದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 400ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು ಜನ ಆತಂಕಗೊಂಡಿದ್ದಾರೆ.
ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ.
ಹೀಗಾಗಿ ಡೆಂಗ್ಯೂ ಸೊಳ್ಳೆಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ವಿಪರೀತ ಜ್ವರ, ಅನಾರೋಗ್ಯದಿಂದ ಜನ ಆಸ್ಪತ್ರೆ ಸೇರುತ್ತಿದ್ದಾರೆ. ಬೆಂಗಳೂರಿನಲ್ಲೂ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಪ್ರಕರಣಗಳು ದಾಖಲಾಗಿದ್ದು, 91 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೂ ರಾಜ್ಯದಲ್ಲಿ ಒಟ್ಟು 63,741 ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 437 ಜನರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಸಣ್ಣ ವಯಸ್ಸಿನವರಲ್ಲಿ ಡೆಂಗ್ಯೂ ಹೆಚ್ಚಾಗಿ ಬಾದಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಪ್ರಕರಣಗಳ ಪೈಕಿ 1-18 ವಯಸ್ಸಿನವರೇ ಹೆಚ್ಚಾಗಿದ್ದಾರೆ.
ಇನ್ನೂ ರಾಜ್ಯದಲ್ಲಿ ಬೆಂಗಳೂರಿನಲ್ಲೇ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈವರೆಗೆ ರಾಜ್ಯದಲ್ಲಿ ಒಟ್ಟು ಏಳು ಸಾವುಗಳು ಸಂಭವಿಸಿವೆ.
ಈಡಿಸ್ ಸೊಳ್ಳೆಯಿಂದ ಡೆಂಗ್ಯೂ
ಡೆಂಗ್ಯೂ ಜ್ವರವು ಸೊಳ್ಳೆ ಕಡಿತದಿಂದ ಹರಡುವಂತಹ ಗಂಭೀರ ಕಾಯಿಲೆಯಾಗಿದೆ. ಭಾರತದಲ್ಲಿ, ಡೆಂಗ್ಯೂಗೆ ಸಾಮಾನ್ಯ ಕಾರಣವೆಂದರೆ ಈಡಿಸ್ ಎಂಬ ಸೊಳ್ಳೆ, ಈಡಿಸ್ ಸೊಳ್ಳೆ ಡೆಂಗ್ಊ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ. ಈಡಿಸ್ ಸೊಳ್ಳೆ ಡೆಂಗ್ಯೂನಿಂದ ಬಳಲುತ್ತಿರುವ ವ್ಯಕ್ತಯ ರಕ್ತವನ್ನು ಹೀರಿಕೊಂಡಾಗಲೆಲ್ಲಾ ಅದು ತನ್ನ ದೇಹದಲ್ಲಿ ಡೆಂಗ್ಯೂ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ.
ಈಡಿಸ್ ಸೊಳ್ಳೆ ಡೆಂಗ್ಯೂನಿಂದ ಬಳಲುತ್ತಿರುವ ವ್ಯಕ್ತಿಯ ರಕ್ತವನ್ನು ಹೀರಿಕೊಂಡಾಗಲೆಲ್ಲ ಅದು ತನ್ನ ದೇಹವನ್ನು ಡೆಂಗ್ಯೂ ವೈರಸ್ ಅನ್ನು ಸಂಗ್ರಹಿಸುತ್ತದೆ. ನಂತರ ಅದು ಇನ್ನೊಬ್ಬ ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ ಡೆಂಗ್ಯೂ ವೈರಸ್ ಆ ವ್ಯಕ್ತಿಯ ದೇಹವನ್ನು ಪ್ರವೇಶಿಸುತ್ತದೆ.
ಡೆಂಗ್ಯೂ ಸೊಳ್ಳೆ ಯಾವಾಗ ಕಚ್ಚುತ್ತದೆ?
ಡೆಂಗ್ಯೂ ಸೊಳ್ಳೆಗಳ ಬಗ್ಗೆ ಸಾಮಾನ್ಯ ತಪ್ಪು ಕಲ್ಪನೆಯೆಂದರೆ ಅವು ಹಗಲಿನಲ್ಲಿ ಮಾತ್ರ ಕಚ್ಚುತ್ತದೆ ಎನ್ನುವುದು, ಆದರೆ ಇದು ನಿಜವಲ್ಲ. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಸನ್ ಪ್ರಕಾರ, ಡೆಂಗ್ಯೂಗೆ ಕಾರಣವಾಗುವ ಈಡಿಸ್ ಸೊಳ್ಳೆಗಳು ಹಗಲು ರಾತ್ರಿ ಕಚ್ಚುತ್ತದೆ. ಈಡಿಸ್ ಸೊಳ್ಳೆಗಳು ಬೆಳಿಗ್ಗೆ ಮತ್ತು ಸಂಜೆ ಹೆಚ್ಚು ಸಕ್ರಿಯವಾಗಿರುತ್ತದೆ. ಆದರೆ ಈ ಸೊಳ್ಳೆಗಳು ರಾತ್ರಿಯಲ್ಲಿ ವಿಶೇಷವಾಗಿ ಕತ್ತಲೆ ಕೋಣೆಗಳಲ್ಲಿ ಕಚ್ಚುತ್ತವೆ.