ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಕರ್ನಾಟಕದ ಜನತೆಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗುವ ಸಾಧ್ಯತೆ ಇದ್ದು, ಟಿಕೆಟ್ ದರ ಏರಿಕೆ ಕುರಿತು ಸುಳಿವು ದೊರೆತಿದೆ.
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ಸಾರಿಗೆ ಬಸ್ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಾಕ್ ನೀಡಲು ಮುಂದಾಗಿದ್ದು, ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ KSRTC ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಸುಳಿವು ನೀಡಿದ್ದಾರೆ.
ಗುಬ್ಬಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ”ಇಂಧನ ದರ, ವಾಹನ ಬಿಡಿ ಭಾಗಗಳ ಬೆಲೆ ಏರಿಕೆ ಹಾಗೂ ಸಿಬ್ಬಂದಿ ವೇತನ ವೆಚ್ಚದಿಂದ ಕೆಎಸ್‌ಆರ್‌ಟಿಸಿ ನಷ್ಟ ಅನುಭವಿಸುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು ಟಿಕೆಟ್ ದರ ಏರಿಕೆ ಅನಿವಾರ್ಯ” ಎಂದು ಹೇಳುವ ಮೂಲಕ ಬಸ್ ಟಿಕೆಟ್ ದರ ಖಚಿತ ಎಂಬ ಸುಳಿವು ನೀಡಿದ್ದಾರೆ.