ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣ : 3 ಆರೋಪಿಗಳಿಗೆ ಜಾಮೀನು

ಪತಿ ಭಾಗಿಯಾದ ಆರೋಪದಲ್ಲಿ ಪತ್ನಿಯನ್ನು ಸೇರಿಸಲಾಗದು : ಹೈಕೋರ್ಟ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಅಮಿತ್​ ದಿಗ್ವೇಕರ್, ಕೆ.ಟಿ. ನವೀನ್ ಕುಮಾರ್, ಸುರೇಶ್ ಹೆಚ್.ಎಲ್​. ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ನ್ಯಾಯಮೂರ್ತಿ. ಎಸ್. ವಿಶ್ವಜಿತ್​ ಶೆಟ್ಟಿ ಅವರಿದ್ದ ಪೀಠ ಆದೇಶಿದೆ.

ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ಪ್ರಕರಣದ ವಿಚಾರಣೆ ಮುಗಿಯದೇ ಇರುವುದರಿಂದ ದೀರ್ಘ ಕಾಲ ಜೈಲಿನಲ್ಲಿಡುವಂತಿಲ್ಲ ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಹಿರಿಯ ವಕೀಲ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್​ ಆರೋಪಿಗಳ ಪರ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಈ ಹಿಂದೆ ಎ -11 ಮೋಹನ್ ನಾಯಕ್​ಗೆ ಮಾತ್ರ ಜಾಮೀನು ಮಂಜೂರಾಗಿತ್ತು.

Leave a Reply

Your email address will not be published. Required fields are marked *