ರಾಜ್ಯದಲ್ಲಿ 10,000 ದಾಟಿದ ಡೆಂಘಿ ಪ್ರಕರಣ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ವರ್ಷದಲ್ಲಿ ಇಲ್ಲಿಯವರೆಗೂ 10,000 ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 487 ಡೆಂಘಿ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರೊಂದಿಗೆ ಜನವರಿಯಿಂದ ಇಲ್ಲಿಯವರೆಗೂ ದೃಢಪಟ್ಟ ಪ್ರಕರಣಗಳ ಸಂಖ್ಯೆ 10, 449ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ 10,449 ಪಾಸಿಟಿವ್ ಪ್ರಕರಣಗಳ ಪೈಕಿ 358 ಸಕ್ರಿಯ ಪ್ರಕರಣಗಳಾಗಿವೆ (ಆಸ್ಪತ್ರೆಗೆ ದಾಖಲಾದವರು) ಡೆಂಘಿಯಿಂದಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 3,770 ಪ್ರಕರಣಗಳು, ಚಿಕ್ಕಮಗಳೂರಿನಲ್ಲಿ 621, ಮೈಸೂರಿನಲ್ಲಿ 562 ಪ್ರಕರಣ ವರದಿಯಾಗಿದೆ.

ಡೆಂಘಿ ಹರಡದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಮುಂಗಾರು ಅವಧಿ ಮುಗಿಯುವವರೆಗೂ ಮುಂದಿನ 2 ತಿಂಗಳ ಕಾಲ ಪ್ರತಿಯೊಬ್ಬರು ಮುಂಜಾಗ್ರತೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಜನರಲ್ಲಿ ಮನವಿ ಮಾಡಿದ್ದರು.

Leave a Reply

Your email address will not be published. Required fields are marked *