ತೆಲಂಗಾಣ : ಇಂದಿನಿಂದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯ ಸರ್ಕಾರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಘೋಷಿಸಿದ್ದಾರೆ. ಕೃಷಿ ಅಭಿವೃದ್ಧಿಯಲ್ಲಿ ದೇಶ ತೆಲಂಗಾಣ ಮಾದರಿಯನ್ನು ಅನುಸರಿಸಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದ್ದಾರೆ.
”ಇಂದು (ಜುಲೈ 18) ಸಂಜೆ 4 ಗಂಟೆಗೆ 1 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡುತ್ತಿದ್ದೇವೆ. ಇದು ನನ್ನ ಜೀವನದಲ್ಲಿ ಮರೆಯಲಾಗದ ದಿನ. 7,000 ಕೋಟಿ ರೂಪಾಯಿ ನೇರವಾಗಿ ರೈತರ ಖಾತೆ ಸೇರಲಿದೆ. ಅದೇ ರೀತಿ, ಈ ತಿಂಗಳಾಂತ್ಯದೊಳಗೆ 1.5 ಲಕ್ಷ ರೂ.ವರೆಗಿನ ರೈತರ ಸಾಲ ಮತ್ತು ಆಗಸ್ಟ್ನಲ್ಲಿ 2 ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾ ಮಾಡಿ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ” ಎಂದು ರೆಡ್ಡಿ ತಿಳಿಸಿದ್ದಾರೆ.
ಬುಧವಾರ ಹೈದರಾಬಾದ್ನ ಜ್ಯೋತಿರಾವ್ ಫುಲೆ ಪ್ರಜಾ ಭವನದಲ್ಲಿ ವಿಧಾನ ಸಭೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ಇತರ ಕಾಂಗ್ರೆಸ್ ಮುಖಂಡರೊಂದಿಗೆ ಸಿಎಂ ರೆಡ್ಡಿ ಸಭೆ ನಡೆಸಿದರು