ಕರ್ನಾಟಕ ಸಾರಿಗೆ ಇಲಾಖೆಯ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್ ಮಾಡಿದರೇ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೀಲ್ಸ್ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ ಎಂದರು.
ಕಳೆದ ಮೇ ತಿಂಗಳಲ್ಲಿ ಚಾಲಕ ಛತ್ರಿ ಹಿಡಿದುಕೊಂಡು ಬಸ್ ಓಡಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಧಾರವಾಡ ಘಟಕದ ಬೇಟಗೇರಿ-ಧಾರವಾಡ ಮರ‍್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ಚಾಲಕರಾಗಿ ಹನುಮಂತಪ್ಪ ಅ ಕಿಲ್ಲೇದಾರ ಹಾಗೂ ನರ‍್ವಾಹಕರಾಗಿ ಅನಿತಾ ಅವರು ರ‍್ತವ್ಯ ನರ‍್ವಹಿಸುತ್ತಿದ್ದರು. ಸಂಜೆ ಮಳೆ ಬರುತ್ತಿದ್ದಾಗ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಇದ್ದಾಗ ಚಾಲಕ ಹನುಮಂತಪ್ಪ ಛತ್ರಿ ಹಿಡಿದು ಬಸ್ ಚಲಾಯಿಸಿದ್ದರು. ಛತ್ರಿ ಹಿಡಿದು ಚಾಲನೆ ಮಾಡುತ್ತಿದ್ದ ದೃಶ್ಯವನ್ನು ನರ‍್ವಾಹಕಿ ಮೊಬೈಲಿನಲ್ಲಿ ಸೆರೆ ಹಿಡಿದಿದ್ದರು.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರ‍್ನಾಟಕ ಬಿಜೆಪಿ ವ್ಯಂಗ್ಯಚಿತ್ರವನ್ನು ಹಂಚಿಕೊಂಡಿದ್ದು ರ‍್ನಾಟಕದ ರ‍್ಕಾರದಿಂದ ಛತ್ರಿ ಭಾಗ್ಯಕ್ಕೆ ಚಾಲನೆ ಎಂದು ರ‍್ಕಾರವನ್ನು ಟೀಕಿಸಿತ್ತು. ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ರ‍್ಕಾರಕ್ಕೆ ಮುಜುಗುರವಾಗಿತ್ತು. ನಂತರ ವಾಯುವ್ಯ ರ‍್ನಾಟಕ ರಸ್ತೆ ಸಾರಿಗೆ ಸಂಸ್ಥೆ ತನಿಖೆ ನಡೆಸಿ, ಇದು ಮನರಂಜನೆಗಾಗಿ ಮಾಡಿದ ವಿಡಿಯೋ ಎಂದು ಸ್ಪಷ್ಟನೆ ನೀಡಿತ್ತು.
ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎತ್ತುಗಳು ಬಲಿ
ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ವೇಳೆ ಕೆಎಸ್ರ‍್ಟಿಸಿ ಬಸ್ ಚಾಲಕ ರೀಲ್ಸ್ ಮಾಡಲು ಆರಂಭಿಸಿದ್ದನು. ಇದೇ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಚಕ್ಕಡಿಯನ್ನು ಗಮನಿಸಿದೆ ರೀಲ್ಸ್ ಗುಂಗಿನಲ್ಲಿದ್ದ ಚಾಲಕ, ಹಿಂಬದಿಯಿಂದ ಚಕ್ಕಡಿಗೆ ಡಿಕ್ಕಿ ಹೊಡೆದಿದ್ದನು. ಬಸ್ ಡಿಕ್ಕಿಯಾದ ರಭಸಕ್ಕೆ ಎರಡು ಎತ್ತು ಸ್ಥಳದಲ್ಲೆ ಮೃತಪಟ್ಟಿದ್ದವು. ರೈತ ರೈತ ಮಂಜುನಾಥ್ ರಂಗಪ್ಪ ಹೆಗ್ಗಣ್ಣವರ ಅವರ ಮೆದಳು ನಿಷ್ಕ್ರೀಯಗೊಂಡಿತ್ತು.