ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಚಿನ್ನ ಮತ್ತು ಬೆಳ್ಳಿಯ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇಕಡಾ 6ಕ್ಕೆ ಮತ್ತು ಪ್ಲಾಟಿನಂ ಮೇಲಿನ ತೆರಿಗೆಯನ್ನು ಶೇಕಡಾ 6.4ರಷ್ಟು ಇಳಿಕೆ ಮಾಡಲಾಗುವುದು ಎಂದು ಸೀತಾರಾಮನ್ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸತತ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್ ಅನ್ನು ಇಂದು (ಮಂಗಳವಾರ) ಸಂಸತ್ತಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು.
”ಫೆರೋನಿಕಲ್, ಬ್ಲಿಸ್ಟರ್ ತಾಮ್ರದ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ತೆಗೆದುಹಾಕಲಾಗುವುದು. ಆದರೆ, ನಿಗದಿತ ಟೆಲಿಕಾಂ ಉಪಕರಣಗಳ ಮೇಲೆ ಶೇಕಡಾ 10 ರಿಂದ ಶೇಕಡಾ 15ಕ್ಕೆ ಹೆಚ್ಚಿಸಲಾಗಿದೆ. ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂ ಮೂಲ ಕಸ್ಟಮ್ಸ್ ಸುಂಕವನ್ನು ಕಡಿತಗೊಳಿಸುವುದು. ಸೀಗಡಿಗಳು ಮತ್ತು ಮೀನಿನ ಆಹಾರದ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇಕಡಾ 5ಕ್ಕೆ ಇಳಿಸಲಾಗುವುದು” ಎಂದು ಸಚಿವರು ತಿಳಿಸಿದರು. ”ಸರ್ಕಾರವು ಅಮೋನಿಯಂ ನೈಟ್ರೇಟ್ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇಕಡಾ 10ಕ್ಕೆ ಮತ್ತು ಜೈವಿಕ ವಿಘಟನೀಯವಲ್ಲದ ಪ್ಲಾಸ್ಟಿಕ್‌ಗಳ ಮೇಲೆ ಶೇಕಡಾ 25ಕ್ಕೆ ಏರಿಕೆ ಮಾಡಲಾಗುವುದು” ಎಂದರು.
”ಎಂಎಸ್‌ಎಂಇಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಪಿಪಿಪಿ (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮೋಡ್‌ನಲ್ಲಿ ಇ-ಕಾಮರ್ಸ್ ರಫ್ತು ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಸಾಂಪ್ರದಾಯಿಕ ಕುಶಲಕರ್ಮಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲು ಸಹಾಯವಾಗುತ್ತದೆ. ಸೌರ ಸೆಲ್ಸ್ ಮತ್ತು ಪ್ಯಾನಲ್‌ಗಳ ತಯಾರಿಕೆಯಲ್ಲಿ ಬಳಸಲಾಗುವ ವಿನಾಯಿತಿ ಪಡೆದಿರುವ ಬಂಡವಾಳ ಸರಕುಗಳ ಪಟ್ಟಿಯನ್ನು ವಿಸ್ತರಿಸಲಾಗುವುದು” ಎಂದು ಅವರು ಹೇಳಿದರು.
ಕ್ಯಾನ್ಸರ್ ಔಷಧಗಳ ಮೇಲಿನ ಸೀಮಾ ಸುಂಕಕ್ಕೆ ವಿನಾಯಿತಿ: ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣ ವಿನಾಯಿತಿಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಿಸಿದೆ. ಈ ಮೂಲಕ ಕ್ಯಾನ್ಸರ್ ರೋಗಿಗಳಿಗೆ ನೆಮ್ಮದಿ ನೀಡಿದೆ.