ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ಉದ್ದೇಶವೇನು?: ಚಿತ್ರಮಂದಿರಗಳು ಮಾರಾಟ ಮಾಡುವ ಟಿಕೆಟ್ ದರದ ಮೇಲೆ ಶೇಕಡಾ 1ರಿಂದ 2ರಷ್ಟು ಸೆಸ್ ಸಂಗ್ರಹಿಸಿ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಈ ವಿಧೇಯಕ ಸರ್ವಾನುಮತದಿಂದ ಅಂಗೀಕಾರವಾಯಿತು. ಪ್ರತಿಪಕ್ಷ ಸದಸ್ಯರೂ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದರು.
ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕ್ಷೇಮಾಭಿವೃದ್ಧಿ ಮಂಡಳಿ ರಚನೆಯಾಗಲಿದೆ. ಅದರ ಮೂಲಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರನ್ನು ನೋಂದಣಿ ಮಾಡಿಸಿ, ಅವರಿಗೆಲ್ಲ ಗುರುತಿನ ಚೀಟಿ ಕೊಟ್ಟು, ಆರೋಗ್ಯ ವಿಮೆ, ಜೀವವಿಮೆ ಮತ್ತಿತರ ಸಾಮಾಜಿಕ ಭದ್ರತೆ ನೀಡುವ ಅಂಶಗಳನ್ನು ಮಸೂದೆ ಒಳಗೊಂಡಿದೆ.