ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಖಾದಿ ಗ್ರಾಮೋದ್ಯೋಗ ವ್ಯವಹಾರವು 1.5 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ. ಖಾದಿ ಮತ್ತು ಕೈಮಗ್ಗ ವಲಯಗಳಿಂದ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ತಮ್ಮ ಮನ್ ಕಿ ಬಾತ್ ಮಾಸಿಕ ರೇಡಿಯೋ ಕಾರ್ಯಕ್ರಮದಲ್ಲಿ ಅವರು, ಖಾದಿ ಉತ್ಪನ್ನಗಳನ್ನು ಹೆಚ್ಚು ಇಷ್ಟಪಡದವರು ಇಂದು ಬಹಳ ಹೆಮ್ಮೆಯಿಂದ ಧರಿಸುತ್ತಾರೆ ಎಂದು ಹೇಳಿದರು.
ಖಾದಿ ಗ್ರಾಮೋದ್ಯೋಗದ ವ್ಯವಹಾರವು ಮೊದಲ ಬಾರಿಗೆ 1.5 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ. ಖಾದಿಯ ಮಾರಾಟವು ಶೇಕಡಾ 400ರಷ್ಟು ಹೆಚ್ಚಾಗಿದೆ. ಖಾದಿ ಮತ್ತು ಕೈಮಗ್ಗ ಮಾರಾಟ ಹೆಚ್ಚಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ಸಂತಸಪಟ್ಟರು.
ಹೆಚ್ಚಾಗಿ ಮಹಿಳೆಯರು ಈ ಉದ್ಯಮದೊಂದಿಗೆ ಸಂಬಂಧ ಹೊಂದಿದ್ದಾರೆ, ಆದ್ದರಿಂದ ಅವರು ಹೆಚ್ಚು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಪ್ರಧಾನಿಗಳು ಹೇಳಿದರು.
ಖಾದಿ ಬಟ್ಟೆಗಳನ್ನು ಹೆಚ್ಚಾಗಿ ಧರಿಸಿ, ಆರೋಗ್ಯ ದೃಷ್ಟಿಯಿಂದಲೂ ಉತ್ತಮ ಎಂದರು.