ಬೆಂಗಳೂರು – ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕುರ್ಚಿಗೆ ಕೈ ಹಾಕಿದರೆ ರಾಜ್ಯಾದ್ಯಂತ ಪ್ರತೀ ಜಿಲ್ಲೆ , ತಾಲ್ಲೂಕು, ಗ್ರಾಮಮಟ್ಟದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಅವರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಿದರೆ ರಕ್ತಕ್ರಾಂತಿ ಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಕುರುಬರ ಸಂಘ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಎಂ.ಈರಣ್ಣ, ಕಾರ್ಯಧ್ಯಕ್ಷ ಬಸವರಾಜ ಲ. ಬಸಲಿಗುಂದಿ, ಖಜಾಂಚಿ ಕೆ.ಎಂ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಸೋಮ ಶೇಖರ್, ರಾಮಚಂದ್ರಪ್ಪ, ವೆಂಕಟೇಶ್ ಮೂರ್ತಿ ಬಿ.ಟಿ.ಜಗದೀಶ್ ಮಾತನಾಡಿ, ಹಿಂದುಳಿದ ಜನಾಂಗದ ನಾಯಕ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದರೆ ಅವರ ಜನಪರ ಕಾಳಜಿ ಮತ್ತು ಇತ್ತೀಚಿಗೆ ತಂದ ಬಡವರ ಕಾರ್ಯಕ್ರಮಗಳನ್ನು ಸಹಿಸಲಾಗದೆ, ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಅರ್. ಅಶೋಕ್ ಮತ್ತು ಆ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ಮುಖಂಡರು ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಮುಡ ಮತ್ತು ವಾಲೀಕಿ ಹಗರಣಗಳನ್ನು ಮುಂದಿಟ್ಟು, ಭ್ರಷ್ಟಾಚಾರ ನಡೆಯದಿದ್ದರೂ ಸುಳ್ಳು ಆರೋಪಗಳನ್ನ ಮಾಡಿ, ಅವರ ಮೇಲೆ ಕಳಂಕ ಹೊರಿಸುವ ಕೆಲಸ ನಡೆದಿದೆ.
ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ, ವಿರೋಧ ಪಕ್ಷದ ನಾಯಕ, 15 ಬಾರಿ ಬಜೆಟ್ ಮಂಡಿಸಿದ ಹಣಕಾಸು ಸಚಿವ ಸೇರಿದಂತೆ 40 ವರ್ಷಗಳ ಸುದೀರ್ಘ ರಾಜಕೀಯದಲ್ಲಿ ಹಲವು ಮಹತ್ವದ ಅಕಾರದ ಹ್ದುೆಯಲ್ಲಿ ಇದ್ದರೂ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದ ನಾಯಕ ಸಿದ್ದರಾಮಯ್ಯರವರ ವರ್ಚಸ್ಸಿಗೆ ಮಸಿ ಬಳಿದು ಅವರನ್ನು ರಾಜಕೀಯವಾಗಿ ಮುಗಿಸಿಯೇ ಬಿಡುವ ಹುನ್ನಾರ ಮಾಡುತ್ತಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ನಾಯಕರ ಕುತಂತ್ರಕ್ಕೆ ಬಿಜೆಪಿಯ ರಾಷ್ಟ್ರೀಯ ನಾಯಕರೂ ಕುಮಕ್ಕು ನೀಡುತ್ತಿದ್ದಾರೆ ಎಂದರು.ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಇದು ಸ್ಪಷ್ಟವಾದ ಎಚ್ಚರಿಕೆ. ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸುವುದು.
ಸಿದ್ದರಾಮಯ್ಯರವರನ್ನು ದುರ್ಬಲ ಗೊಳಿಸುವ ಕುತಂತ್ರವನ್ನು ಕೂಡಲೇ ನಿಲ್ಲಿಸದಿದ್ದರೆ ರಾಜ್ಯದ ಕುರಬ ಸಮಾಜದವರು ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ತಮ ವಿರುದ್ಧ ಸಿಡಿದೇಳಬೇಕಾಗುತ್ತದೆ. ನೀವು ಪಾದಯಾತ್ರೆಯ ಬೆದರಿಕೆ ಹಾಕಿದರೆ ಪರ್ಯಾಯವಾಗಿ ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳು ಇಡೀ ರಾಜ್ಯಾದ್ಯಂತ ಪ್ರತಿಭಟನಾ ಕಾರ್ಯಕ್ರಮಗಳು ಹಾಗೂ ಹಿಂದುಳಿದ ವರ್ಗಗಳ ಎಚ್ಚರಿಕೆ ಸಮಾವೇಶ ಮಾಡಬೇಕಾಗುತ್ತದೆ ಎಂದರು.