ಅಯೋಧ್ಯೆ || ಅಪ್ತಾಪ್ತ ಬಾಲಕಿ ಮೇಲೆ ಅತ್ಯಾಚಾರ : ಮನೆ, ಬೇಕರಿ ಧ್ವಂಸ

ಲಖನೌ: ಅಯೋಧ್ಯೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರಿಗೆ ಸೇರಿದ ಬೇಕರಿ ಮತ್ತು ಮನೆಯನ್ನು ಜಿಲ್ಲಾಡಳಿತದ ಅಧಿಕಾರಿಗಳ ತಂಡ ಶನಿವಾರ ನೆಲಸಮಗೊಳಿಸಿದೆ. ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಆರೋಪ ಖಾನ್ ಮೇಲಿದೆ.

ಅಯೋಧ್ಯೆಯ ಬಿಕಾಪುರ್ ವಿಧಾನಸಭಾ ಕ್ಷೇತ್ರದ ಭದರ್ಸಾ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ಕೆರೆ ಭೂಮಿಯಲ್ಲಿ ನಿರ್ಮಿಸಲಾಗಿದ ಬೇಕರಿಯನ್ನು ಧ್ವಂಸಗೊಳಿಸಲಾಗಿದೆ. ಕೆರೆಯ ಸಣ್ಣ ಭೂಮಿಯಲ್ಲಿ ಬೇಕರಿ ನಿರ್ಮಿಸಲಾಗಿತ್ತು. ಉಳಿದ ಭಾಗವನ್ನು ಕೃಷಿಗೆ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸಹಾಯಕ ಆಹಾರ ಆಯುಕ್ತ ಮಾಣಿಕಚಂದ್ ಸಿಂಗ್ ಬೇಕರಿ ಮೇಲೆ ದಾಳಿ ನಡೆಸಿದರು, ಈ ಸಂದರ್ಭದಲ್ಲಿ ಆಹಾರ ಉತ್ಪನ್ನಗಳ ಮಾದರಿಗಳನ್ನು ಪರೀಕ್ಷೆಗೆ ತೆಗೆದುಕೊಂಡು ನಂತರ ಬೇಕರಿ ಸೀಲ್ ಮಾಡಲಾಯಿತು. ಇದರ ಬೆನ್ನಲ್ಲೇ ಬೇಕರಿ ಪರವಾನಗಿ ರದ್ದುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ. ಒತ್ತುವರಿ ಮಾಡಿಕೊಂಡಿರುವ ಜಮೀನಿನಲ್ಲಿ ಬೇಕರಿ ನಿರ್ಮಿಸಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಯ ಮನೆಯನ್ನು ಕೆಡವಬಹುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ರಾಜಕೀಯ ಆಟವಾಡುತ್ತಿದೆ ಎಂದು ಖಾನ್ ಗೆ ಆಪ್ತರಾಗಿರುವ ಸಂಸದ ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. 

Leave a Reply

Your email address will not be published. Required fields are marked *