ಬೆಂಗಳೂರಿನ Lalbaghನಲ್ಲಿ ಆ.8 ರಿಂದ ಫ್ಲವರ್ ಶೋ : ಈ ಬಾರಿಯ ಥೀಮ್ ಏನು..?

ಬೆಂಗಳೂರು : ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆ.8 ರಿಂದ 19 ರವರೆಗೆ ಫ್ಲವರ್ ಶೋ ನಡೆಯಲಿದ್ದು, ಆ.8 ರಿಂದ ಬೆಂಗಳೂರಿಗರು ವಿವಿಧ ಹೂವಿನ ಸೊಬಗನ್ನು ಸವಿಯಬಹುದಾಗಿದೆ.

ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಸಂವಿಧಾನ ಶಿಲ್ಪಿ ಡಾ.

ಬಿ.ಆರ್. ಅಂಬೇಡ್ಕರ್ ಅವರ ಜೀವನ ವಿಷಯಾಧಾರಿತ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 8 ರಿಂದ 19ರ ವರೆಗೆ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಇದಕ್ಕಾಗಿ ಈಗಾಗಲೇ ತೋಟಗಾರಿಕಾ ಇಲಾಖೆ ವಿವಿಧ ಬಗೆಯ ಅಲಂಕಾರಿಕ, ದೇಶಿ – ವಿದೇಶಿ ಹೂಗಳನ್ನು ಸಿದ್ಧತೆ ಮಾಡಿಕೊಳ್ಳುತ್ತಿದೆ.

Leave a Reply

Your email address will not be published. Required fields are marked *